bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Kings 8
2 Kings 8
Kannada Bible (KNCL) BSI 2016
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 9 →
1
ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.
2
ಆಕೆ ದೈವಪುರುಷನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವಂತನಾಡನ್ನು ಬಿಟ್ಟುಹೋಗಿ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದಳು.
3
ಏಳು ವರ್ಷಗಳಾದನಂತರ ಆಕೆ ಅಲ್ಲಿಂದ ಸ್ವಂತ ನಾಡಿಗೆ ಬಂದು, ಪರರ ಕೈವಶವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು.
4
ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.
5
ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.
6
ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನೇ ವಿಚಾರಿಸಿದನು. ಆಕೆ ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಹೋಗಿ ಈಕೆಯ ಹೊಲಮನೆಗಳನ್ನೂ ಈಕೆ ಈ ನಾಡನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು,” ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲೇ ಕಳುಹಿಸಿದನು.
7
ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,
8
ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.
9
ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.
10
ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”
11
ಎಂದು ಹೇಳಿ ಬಿಗಿ ಮುಖದಿಂದ, ಸ್ಥಿರದೃಷ್ಟಿಯಿಂದ ಹಜಾಯೇಲನನ್ನೇ ದಿಟ್ಟಿಸಿ ನೋಡಿ ಅಳತೊಡಗಿದನು.
12
ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.
13
ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.
14
ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು, “ಎಲೀಷ ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಇವನು, “ನಿಮಗೆ ಖಂಡಿತವಾಗಿ ಗುಣವಾಗುವುದೆಂದು ಹೇಳಿದರು,” ಎಂಬುದಾಗಿ ಉತ್ತರಕೊಟ್ಟನು.
15
ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.
16
ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.
17
ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.
18
ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
19
ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.
20
ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.
21
ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
22
ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.
23
ಯೆಹೋರಾಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.
24
ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.
25
ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.
26
ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದ ವಯಸ್ಸಿನವನಾಗಿದ್ದನು. ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಯೇಲರ ಅರಸನಾದ ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ.
27
ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.
28
ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.
29
ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25