bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Samuel 21
2 Samuel 21
Kannada Bible (KNCL) BSI 2016
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 22 →
1
ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.
2
(ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.
3
ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.
4
ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯ ಬೆಳ್ಳಿಬಂಗಾರದಿಂದ ತೀರಲಾರದು; ಇಸ್ರಯೇಲರನ್ನು ಕೊಲ್ಲುವ ಅಧಿಕಾರ ನಮಗಿಲ್ಲ,” ಎಂದು ಉತ್ತರಕೊಟ್ಟರು. ಅರಸನು ಅವರಿಗೆ, “ಏನು ಮಾಡಬೇಕು ಹೇಳಿ; ಮಾಡುತ್ತೇನೆ,” ಎಂದನು.
5
ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ.
6
ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.
7
ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.
8
ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.
9
ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.
10
ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.
11
ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು.
12
ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.
13
ದಾವೀದನು ಯಾಬೇಷಿನಲ್ಲಿದ್ದ ಸೌಲ ಹಾಗು ಯೋನಾತಾನರ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಈ ಮನುಷ್ಯರ ಎಲುಬುಗಳನ್ನೂ ತೆಗೆದುಕೊಂಡು
14
ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.
15
ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.
16
ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.
17
ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.
18
ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕ್ಕೆ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
19
ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೆತ್ಲೆಹೇಮಿನವನಾದ ಯಾರೇಯೋ ರೆಗೀಮ್ ಎಂಬವನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಭರ್ಜಿಯ ಹಿಡಿಕೆ ನೇಯಿಗಾರರ ಕುಂಟೆಯಷ್ಟು ಗಾತ್ರ ಇತ್ತು.
20
ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.
21
ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.
22
ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24