bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Samuel 3
2 Samuel 3
Kannada Bible (KNCL) BSI 2016
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 4 →
1
ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.
2
ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಆರು: ಚೊಚ್ಚಲ ಮಗ ಅಮ್ನೋನನು; ಇವನು ಜೆಸ್ರೀಲಿನವಳಾದ ಅಹೀನೋವಮಳ ಮಗ.
3
ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.
4
ನಾಲ್ಕನೆಯವನು ಅದೋನೀಯನು; ಇವನು ಹಗ್ಗೀತಳ ಮಗ.
5
ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು; ಆರನೆಯವನು ಇತ್ರಾಮನು. ಇವನು ದಾವೀದನ ಹೆಂಡತಿ ಆದ ಎಗ್ಲಳ ಮಗ. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರು.
6
ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು.
7
ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ?” ಎಂದು ಕೇಳಿದನು.
8
ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?
9
ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ.
10
ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.
11
ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.
12
ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.
13
ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.
14
ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.
15
ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆದು ತರಿಸಿದನು.
16
ಆಗ ಪಲ್ಟೀಯೇಲನು ಅಳುತ್ತಾ ಬಹುರೀಮಿನವರೆಗೆ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗು, ನಡೆ,” ಎಂದು ಹೇಳಲು ಅವನು ಹಿಂದಿರುಗಿಹೋದನು.
17
ಅಬ್ನೇರನು ಇಸ್ರಯೆಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಬಹುದಿನದಿಂದ ಅಪೇಕ್ಷಿಸಿದಿರಿ. ಈಗ ಅವಕಾಶ ಒದಗಿದೆ.
18
ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು.
19
ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು.
20
ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.
21
ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.
22
ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಯೋಧರು ಮತ್ತು ಯೋವಾಬನು ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.
23
ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು, ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ತಿಳಿದುಕೊಂಡನು.
24
ಅರಸನ ಬಳಿಗೆ ಹೋಗಿ, “ನೀವು ಮಾಡಿದ್ದೇನು? ಅಬ್ನೇರನು ನಿಮ್ಮ ಬಳಿಗೆ ಬಂದಿದ್ದನಂತೆ; ನೀವು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?
25
ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು.
26
ಅನಂತರ ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರೆದುತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.
27
ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.
28
ತುಸುಹೊತ್ತಾದ ಮೇಲೆ ಈ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಸರ್ವೇಶ್ವರನ ಮುಂದೆ ಸದಾ ನಿರ್ದೋಷಿಗಳು.
29
ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು
30
ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.
31
ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.
32
ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು.
33
ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ!
34
ನಿನ್ನ ಕೈ ಕಂಕಣಬದ್ಧವಾಗಿರಲಿಲ್ಲ, ನಿನ್ನ ಕಾಲಿಗೆ ಬೇಡಿ ಬಿದ್ದಿರಲಿಲ್ಲ, ದುಷ್ಟರಿಂದಲೋ ಎಂಬಂತೆ ನೀನು ಹತನಾದೆಯಲ್ಲಾ!” ಎಂದು ಶೋಕಗೀತೆಯನ್ನು ಹಾಡಿದನು. ಜನರು ಮತ್ತೆ ಕಣ್ಣೀರು ಸುರಿಸಿದರು.
35
ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.
36
ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.
37
ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.
38
ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.
39
ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24