bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Samuel 8
2 Samuel 8
Kannada Bible (KNCL) BSI 2016
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 9 →
1
ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
2
ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
3
ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.
4
ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.
5
ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು.
6
ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.
7
ಅವನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಜೆರುಸಲೇಮಿಗೆ ಒಯ್ದನು.
8
ಇದಲ್ಲದೆ ಹದದೆಜೆರನ ಪಟ್ಟಣಗಳಿಂದ ಬೆಟಹದಿಂದಲೂ ಬೇರೋತೈಯಿಂದಲೂ ಅಪಾರ ತಾಮ್ರವನ್ನು ತೆಗೆದುಕೊಂಡು ಬಂದನು.
9
ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
10
ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.
11
ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ
12
ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.
13
ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.
14
ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.
15
ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.
16
ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.
17
ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.
18
ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 9 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24