bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
2 Thessalonians 1
2 Thessalonians 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 2 →
1
ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.
2
ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!
3
ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.
4
ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.
5
ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.
6
ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.
7
ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.
9
ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.
10
ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.
11
ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.
12
ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.
Jump to:
Chapter 1
Chapter 2
Chapter 3
Chapter 2 →
All chapters:
1
2
3