bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Amos 8
Amos 8
Kannada Bible (KNCL) BSI 2016
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 9 →
1
ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.
2
ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.
3
ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.
4
ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,
5
“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;
6
ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?
7
ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.
8
ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.
9
ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.
10
ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”
11
ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.
12
ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.
13
ಆ ದಿನದಂದು ಗಟ್ಟಿಮುಟ್ಟಾದ ಯುವಕ ಯುವತಿಯರೂ ಬಾಯಾರಿಕೆಯಿಂದ ಮೂರ್ಛೆಹೋಗುವರು.
14
ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 9 →
All chapters:
1
2
3
4
5
6
7
8
9