bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Daniel 1
Daniel 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 2 →
1
ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
2
ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು. ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.
3
ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ.
4
ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.
5
ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.
6
ಹೀಗೆ ಆರಿಸಿಕೊಂಡ ಯುವಕರಲ್ಲಿ ದಾನಿಯೇಲನು, ಹನನ್ಯನು, ಮಿಶಾಯೇಲನು, ಅಜರ್ಯನು ಎಂಬ ಯೆಹೂದ್ಯರು ಸೇರಿದ್ದರು.
7
ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್ನೆಗೋ’, ಎಂಬ ಹೆಸರಿಟ್ಟನು.
8
ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.
9
ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.
10
ಆದುದರಿಂದ ಆ ನಾಯಕನು ದಾನಿಯೇಲನಿಗೆ, “ನಿಮಗೆ ಅನ್ನಪಾನಗಳನ್ನು ಏರ್ಪಡಿಸಿದ ನನ್ನೊಡೆಯನಾದ ರಾಜನು ನಿಮ್ಮಂತೆ ಆಯ್ಕೆಯಾದ ಯುವಕರ ಮುಖಕ್ಕಿಂತ ನಿಮ್ಮ ಮುಖ ಬಾಡಿರುವುದನ್ನು ನೋಡಿ ನನ್ನ ತಲೆ ತೆಗೆಸಬಹುದೆಂಬ ಭಯ ನನಗಿದೆ. ಇದಕ್ಕೆ ನೀವು ಕಾರಣರಾಗಬಹುದಲ್ಲವೆ?” ಎಂದು ಹೇಳಿದನು.
11
ದಾನಿಯೇಲನು ತನ್ನನ್ನೂ, ಹನನ್ಯ, ಮಿಶಾಯೇಲ, ಅಜರ್ಯ ಇವರನ್ನೂ ನೋಡಿಕೊಳ್ಳಲು ಆ ನಾಯಕನು ನೇಮಿಸಿದ್ದ ವಿಚಾರಕನ ಬಳಿಗೆ ಬಂದು,
12
“ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.
13
ಆಮೇಲೆ ನಮ್ಮ ಮುಖಗಳನ್ನೂ ರಾಜಭೋಜನ ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು. ಅನಂತರ ನಿನಗೆ ತೋಚಿದ ಹಾಗೆ ನಮಗೆ ಮಾಡು,” ಎಂದು ಕೇಳಿಕೊಂಡನು.
14
ವಿಚಾರಕನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನದವರೆಗೆ ಪರೀಕ್ಷಿಸಿದನು.
15
ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.
16
ಅಂದಿನಿಂದ ವಿಚಾರಕನು ಇವರಿಗೆ ನೇಮಕವಾದ ಭೋಜನಪದಾರ್ಥಗಳನ್ನೂ ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದುಬಿಟ್ಟು ಕಾಯಿಪಲ್ಯಗಳನ್ನೇ ಕೊಡುತ್ತಾ ಬಂದನು.
17
ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.
18
ರಾಜನು ನೇಮಿಸಿದ ಕಾಲವು ಕಳೆಯಿತು. ಆ ಯುವಕರನ್ನು ರಾಜಸನ್ನಿಧಿಗೆ ಕರೆದುತರುವ ಸಮಯವು ಬಂದಿತು. ಕಂಚುಕಿಯರ ನಾಯಕ ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದುತಂದನು.
19
ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.
20
ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.
21
ದಾನಿಯೇಲನು ರಾಜ ಸೈರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 2 →
All chapters:
1
2
3
4
5
6
7
8
9
10
11
12