bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Deuteronomy 7
Deuteronomy 7
Kannada Bible (KNCL) BSI 2016
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 8 →
1
“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.
2
ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,
3
ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು.
4
ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.
5
ಆದುದರಿಂದ ನೀವು ಹೀಗೆ ಮಾಡಬೇಕು; ಅವರ ಯಜ್ಞವೇದಿಗಳನ್ನು ಕೆಡವಬೇಕು, ಅವರ ಪವಿತ್ರಶಿಲೆಗಳನ್ನು ಒಡೆಯಬೇಕು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಬಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
6
ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.
7
“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.
8
ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.
9
ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.
10
ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.
11
ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.
12
“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,
13
ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.
14
ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.
15
ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.
16
ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.
17
‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?
18
ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.
19
ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.
20
ಅದು ಮಾತ್ರವಲ್ಲದೆ, ನಿಮ್ಮ ದೇವರಾದ ಸರ್ವೇಶ್ವರ ಕಣಜದ ಹುಳುಗಳನ್ನು ಅವರ ನಡುವೆ ಕಳುಹಿಸುವರು; ಮರೆ ಆಗಿ ಉಳಿದುಕೊಂಡವರು ಆ ಹುಳಗಳಿಂದ ನಾಶವಾಗಿ ನಿಮಗೆ ಕಾಣದೆಹೋಗುವರು.
21
ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.
22
ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.
23
ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು.
24
ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.
25
“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.
26
ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34