bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Deuteronomy 9
Deuteronomy 9
Kannada Bible (KNCL) BSI 2016
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 10 →
1
“ಇಸ್ರಯೇಲರೇ ಕೇಳಿ: ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.
2
ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.
3
ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.
4
“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.
5
ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.
6
ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.
7
“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.
8
ಉದಾಹರಣೆಗೆ, ಹೋರೇಬಿನಲ್ಲಿ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಅವರು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದರು.
9
ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.
10
ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು.
11
ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;
12
ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.
13
“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;
14
ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.
15
ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.
16
ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.
17
ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ.
18
“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.
19
ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.
20
ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.
21
ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.
22
“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.
23
ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.
24
ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.
25
“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.
26
ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.
27
ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.
28
ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
29
ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34