bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ecclesiastes 11
Ecclesiastes 11
Kannada Bible (KNCL) BSI 2016
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 12 →
1
ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.
2
ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.
3
ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.
4
ಗಾಳಿಗಾಗಿಯೇ ಕಾದಿರುವವನು, ಮೋಡಕ್ಕಾಗಿಯೇ ಎದುರು ನೋಡುತ್ತಿರುವವನು ಎಂದಿಗೂ ಬೀಜಬಿತ್ತಲಾರನು; ಎಂದಿಗೂ ಪೈರು ಕೊಯ್ಯಲಾರನು.
5
ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.
6
ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.
7
ಬೆಳಕು ಬಹಳ ಇಂಪು; ಸೂರ್ಯನ ಕಾಂತಿ ಕಣ್ಣುಗಳಿಗೆ ಸೊಂಪು. ಮಾನವನು ಎಷ್ಟೇ ಧೀರ್ಘಕಾಲ ಬದುಕಿರಲಿ ತನ್ನ ಬಾಳಿನ ದಿನಗಳಲ್ಲೆಲ್ಲಾ ಆನಂದಿಸಲಿ; ಆದರೆ ಅಂಧಕಾರದ ದಿನಗಳು ಸಹ ಬಹಳ ಇವೆ ಎಂಬುದನ್ನು ನೆನಪಿಗೆ ತಂದುಕೊಳ್ಳಲಿ. ಆ ಬಳಿಕ ಬರುವುದೆಲ್ಲಾ ನಿರರ್ಥಕ.
8
ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.
10
ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 12 →
All chapters:
1
2
3
4
5
6
7
8
9
10
11
12