bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ephesians 3
Ephesians 3
Kannada Bible (KNCL) BSI 2016
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 4 →
1
ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:
2
ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ.
3
ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.
4
ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ.
5
ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.
6
ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.
7
ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.
8
ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.
9
ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.
10
ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.
11
ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.
12
ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.
13
ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.
14
ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:
15
ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.
16
ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;
17
ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.
18
ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.
19
ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.
20
ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 4 →
All chapters:
1
2
3
4
5
6