bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Exodus 25
Exodus 25
Kannada Bible (KNCL) BSI 2016
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 26 →
1
ಮೋಶೆಗೆ ಸರ್ವೇಶ್ವರ ಸ್ವಾಮಿ ಹೀಗೆಂದು ಹೇಳಿದರು:
2
“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.
3
ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,
4
ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,
5
ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,
6
ಜಾಲೀಮರ, ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕ ತೈಲಕ್ಕೆ ಹಾಗು ಪರಿಮಳ ಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
7
ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.
8
ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.
9
ನಾನು ನಿಮಗೆ ತೋರಿಸುವ ಮಾದರಿಯ ಪ್ರಕಾರವೇ ಆ ಗುಡಾರವನ್ನೂ ಅದರಲ್ಲಿನ ಎಲ್ಲ ಸಾಮಾಗ್ರಿಗಳನ್ನೂ ಮಾಡಿಸಬೇಕು.
10
“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಹಾಗು ಒಂದುವರೆ ಮೊಳ ಎತ್ತರವಾಗಿರಲಿ.
11
ಅಪ್ಪಟ ಬಂಗಾರದ ತಗಡುಗಳನ್ನು ಅದರ ಹೊರಗಡೆ ಮತ್ತು ಒಳಗಡೆ ಹೊದಿಸಿರಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
12
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಗಳಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
13
ಆ ಮಂಜೂಷವನ್ನು ಹೊರುವುದಕ್ಕಾಗಿ ಜಾಲೀಮರದ ದೊಣ್ಣೆಗಳನ್ನು ಮಾಡಿಸಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,
14
ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
15
ಆ ದೊಣ್ಣೆಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು.
16
ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.
17
“ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು.
18
ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.
19
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.
20
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
21
ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.
22
ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.
23
“ಜಾಲೀ ಮರದಿಂದ ಒಂದು ಮೇಜನ್ನು ಮಾಡಿಸು. ಅದು ಎರಡು ಮೊಳ ಉದ್ದ ಒಂದು ಮೊಳ ಅಗಲ ಹಾಗು ಒಂದುವರೆ ಮೊಳ ಎತ್ತರವಾಗಿರಲಿ.
24
ಅದಕ್ಕೆ ಅಪ್ಪಟ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ತೋರಣ ಕಟ್ಟಿಸಬೇಕು.
25
ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.
26
ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಿಸಬೇಕು.
27
ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ದೊಣ್ಣೆಗಳನ್ನು ಅವುಗಳಲ್ಲಿ ಸೇರಿಸಬೇಕು.
28
ಆ ದೊಣ್ಣೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಆ ಮೇಜನ್ನು ಎತ್ತಬೇಕು.
29
ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು.
30
ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.
31
“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.
32
ಆ ವೃಕ್ಷದ ಒಂದೊಂದು ಕಡೆಯಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
33
ಪ್ರತಿಯೊಂದು ಕೊಂಬೆಯಲ್ಲೂ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗು ಹಾಗು ಒಂದು ಹೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
34
ದೀಪವೃಕ್ಷದ ಕಾಂಡದಲ್ಲಿ ಮೊಗ್ಗುಗಳೂ ಹೂಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
35
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗಿರಬೇಕು.
36
ಮೊಗ್ಗುಗಳನ್ನೂ ಕೊಂಬೆಗಳನ್ನೂ ಒಳಗೊಂಡ ದೀಪವೃಕ್ಷವನ್ನೆಲ್ಲಾ ಅಪ್ಪಟ ಬಂಗಾರವನ್ನು ಉಪಯೋಗಿಸಿ ನಕಾಸಿ ಕೆಲಸದಿಂದ ಮಾಡಿಸಬೇಕು.
37
ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.
38
ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.
39
ಆ ದೀಪವೃಕ್ಷವನ್ನು ಅದರ ಎಲ್ಲ ಉಪಕರಣಗಳನ್ನು ಮಾಡಿಸಲು ಒಂದು ತಲಾಂತು ಅಪ್ಪಟ ಬಂಗಾರವನ್ನು ಉಪಯೋಗಿಸಬೇಕು.
40
ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40