bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Exodus 28
Exodus 28
Kannada Bible (KNCL) BSI 2016
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 29 →
1
:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.
2
ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.
3
ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.
4
ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.
5
ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರವನ್ನು ಮತ್ತು ನಾರಿನಬಟ್ಟೆಯನ್ನು ಈ ವಸ್ತ್ರಗಳನ್ನು ತಯಾರಿಸಲು ಉಪಯೋಗಿಸು.
6
‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.
7
ಈ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳಿರಬೇಕು. ಅದಕ್ಕೆ ಎರಡು ಕೊನೆಗಳು ಜೋಡಿಸಲ್ಪಡಬೇಕು.
8
ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಕವಚದ ಅಂಗವಾಗಿರಬೇಕು. ಅದರಂತೆಯೇ ಹುರಿನಾರಿನ ಬಟ್ಟೆಯಿಂದ ಮಾಡಿರಬೇಕು. ಚಿನ್ನದ ದಾರದಿಂದಲೂ ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.
9
ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.
10
ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಕ್ರಮಾನುಸಾರ ಕೆತ್ತಿಸು.
11
ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.
12
ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.
13
ಆ ರತ್ನಗಳನ್ನು ಖಚಿಸಿಡುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.
14
ಅಲ್ಲದೇ ಹೆಣೆಗೇ ಕೆಲಸದಿಂದ ಹುರಿಗಳಂತಿರುವ ಎರಡು ಅಪ್ಪಟ ಬಂಗಾರದ ಸರಪಣಿಗಳನ್ನು ಮಾಡಿಸಿ ಆ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.
15
“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.
16
ಅದು ಒಂದು ಗೇಣು ಉದ್ದ, ಒಂದು ಗೇಣು ಅಗಲ ಹಾಗು ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಲಿ.
17
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲುಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಹಾಗು ಸ್ಫಟಿಕಗಳನ್ನು;
18
ಎರಡನೆಯ ಸಾಲಿನಲ್ಲಿ ಕೆಂಪರಲು ಹಾಗು ನೀಲಿ ಪಚ್ಚೆಗಳನ್ನು;
19
ಮೂರನೆಯ ಸಾಲಿನಲ್ಲಿ ಸುವರ್ಣ ರತ್ನ, ಗೋಮೇಧಕ ಹಾಗು ಧೂಮ್ರಮಣಿಗಳನ್ನು; ಮತ್ತು
20
ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಹಾಗು ವೈಢೂರ್ಯಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.
21
ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
22
ಅದೂ ಅಲ್ಲದೆ ಆ ಎದೆಫಲಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಅಪ್ಪಟ ಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.
23
ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಎರಡು ಮೂಲೆಗಳಿಗೆ ಹಚ್ಚಬೇಕು.
24
ಆ ಎರಡು ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಬೇಕು.
25
ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು.
26
ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಆ ಎದೆಫಲಕದ ಒಳಗೂ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು.
27
ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
28
ಎದೆಫಲಕವು ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆ ಹಾಗು ಕವಚದಿಂದ ಕಳಚಿಬೀಳದಂತೆ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿಸಬೇಕು.
29
“ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು.
30
ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.
31
“ಪ್ರಧಾನ ಯಾಜಕನು ಎಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿ ಬಣ್ಣದ ಬಟ್ಟೆಯಿಂದ ಮಾಡಿಸು.
32
ತಲೆದೂರಿಸುವುದಕ್ಕೆ ಇರುವ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಹಾಕಿಸಬೇಕು.
33
ಮೇಲಂಗಿಯ ಅಂಚಿನ ಸುತ್ತಲೂ ನೀಲಿ, ಊದ ಹಾಗು ಕಡುಗೆಂಪು ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನೂ ಅವುಗಳ ನಡುವೆ ಗೆಜ್ಜೆಗಳನ್ನೂ ತಗಲಿಸಬೇಕು.
34
ಚಿನ್ನದ ಗೆಜ್ಜೆಯು ಹಾಗು ದಾಳಿಂಬೆಯಂತಿರುವ ಚಂಡು ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲು ಇರಬೇಕು.
35
ಆರೋನನು ಸೇವೆ ಸಲ್ಲಿಸುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಪವಿತ್ರಸ್ಥಾನದೊಳಗೆ ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಹಾಗು ಹೋಗುವಾಗ ಆ ಗೆಜ್ಜೆಗಳ ಶಬ್ದ ಕೇಳಿಸಬೇಕು. ಇಲ್ಲದಿದ್ದರೆ ಅವನು ಸಾಯುವನು.
36
“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.
37
ಅದನ್ನು ಪೇಟಕ್ಕೆ ಬಿಗಿಯುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಪೇಟದ ಮುಂಭಾಗದಲ್ಲಿ ಇರಬೇಕು.
38
ಇಸ್ರಯೇಲರನ್ನು ಪರಿಶುದ್ಧಗೊಳಿಸುವ ಪವಿತ್ರವಸ್ತುಗಳಲ್ಲಿ ಹಾಗು ಅವರು ಕಾಣಿಕೆಯಾಗಿ ಸಮರ್ಪಿಸುವ ಸಮಸ್ತವಸ್ತುಗಳಲ್ಲಿ ದೋಷವೇನಾದರು ಇದ್ದರೆ ಆರೋನನು ಆ ಪಟ್ಟಿಯನ್ನು ತಲೆಯ ಮೇಲೆ ಧರಿಸಿ ಆ ದೋಷವನ್ನು ತಾನೇ ವಹಿಸಿಕೊಳ್ಳುತ್ತಾನೆ. ಆದ್ದರಿಂದ ಅವರು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಅಂಗೀಕೃತರಾಗುತ್ತಾರೆ.
39
“ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಯವಾದ ನಾರಿನಿಂದ ನೇಯಿಸು. ಅವನ ಪೇಟವನ್ನೂ ಅಂತೆಯೇ ನಯವಾದ ನಾರಿನಿಂದ ಮಾಡಿಸು. ಅವನ ನಡುಕಟ್ಟು ಕಸೂತಿ ಕೆಲಸದಿಂದ ಅಲಂಕಾರವಾಗಿರಬೇಕು.
40
“ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.
41
ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.
42
ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.
43
ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 29 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40