bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Exodus 30
Exodus 30
Kannada Bible (KNCL) BSI 2016
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 31 →
1
“ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು.
2
ಅದು ಒಂದು ಮೊಳ ಉದ್ದ ಹಾಗು ಒಂದು ಮೊಳ ಅಗಲವಾಗಿದ್ದು ಚಚ್ಚೌಕವಾಗಿರಲಿ. ಅದರ ಎತ್ತರ ಎರಡು ಮೊಳವಿರಲಿ. ಅದರ ಕೊಂಬುಗಳು ಅದರ ಅಂಗಾಂಗವಾಗಿರಲಿ.
3
ಅದರ ಮೇಲ್ಭಾಗಕ್ಕೂ, ನಾಲ್ಕು ಪಕ್ಕಗಳಿಗೂ ಹಾಗು ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲು ಚಿನ್ನದ ತೋರಣ ಕಟ್ಟಿಸಬೇಕು.
4
ಅದರ ಕೆಳಗೆ ವೇದಿಕೆಯ ಎರಡು ಪಕ್ಕಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಕೆಯನ್ನು ಹೊರುವುದಕ್ಕೆ ಗುದಿಗೆಗಳನ್ನು ಅವುಗಳಲ್ಲಿ ಸೇರಿಸಬೇಕು.
5
ಆ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.
6
ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.
7
ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.
8
ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.
9
ಆ ವೇದಿಕೆಯ ಮೇಲೆ ಬೇರೆ ಯಾವ ಅಪವಿತ್ರ ಧೂಪವನ್ನೂ ಹಾಕಕೂಡದು. ಅದರ ಮೇಲೆ ದಹನಬಲಿಯನ್ನಾಗಲಿ, ಅನ್ನಪಾನ ದ್ರವ್ಯಗಳನ್ನಾಗಲಿ ಅರ್ಪಿಸಕೂಡದು.
10
ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.
11
ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:
12
“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.
13
ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.
14
ಜನಗಣತಿಯಲ್ಲಿ ಸೇರಿಸಲಾದ ಇಪ್ಪತ್ತು ವರ್ಷದ ಹಾಗು ಅದಕ್ಕೂ ಹೆಚ್ಚು ವಯಸ್ಸಿನವರು ಈ ತೆರಿಗೆಯನ್ನು ನನಗೆ ಕಟ್ಟಬೇಕು.
15
ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.
16
ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”
17
ಸರ್ವೇಶ್ವರ ಮೋಶೆಗೆ ಮತ್ತೆ ಹೀಗೆಂದರು:
18
“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು.
19
ಆರೋನನು ಮತ್ತು ಅವನ ಮಕ್ಕಳು ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.
20
ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.
21
ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ.
22
ಇದೂ ಅಲ್ಲದೆ ಸರ್ವೇಶ್ವರ ಮೋಶೆಗೆ ಇಂತೆಂದರು:
23
“ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.
24
ಅದಕ್ಕೆ ನಾಲ್ಕು ಲೀಟರು ಓಲಿವ್ ಎಣ್ಣೆಯನ್ನು ಕೂಡಿಸಬೇಕು.
25
ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ಇವುಗಳನ್ನು ಮಿಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕ ತೈಲವನ್ನು ತಯಾರಿಸಬೇಕು.
26
ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,
27
ದೀಪವೃಕ್ಷ, ದೀಪವೃಕ್ಷದ ಉಪಕರಣಗಳು, ಧೂಪವೇದಿಕೆ,
28
ಬಲಿಪೀಠ, ಬಲಿಪೀಠದ ಉಪಕರಣಗಳು, ನೀರಿನ ತೊಟ್ಟಿ ಹಾಗು ಅದರ ಪೀಠ ಇವುಗಳನ್ನೆಲ್ಲ ಅಭಿಷೇಕಿಸಬೇಕು.
29
ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು.
30
ಅಲ್ಲದೆ ಆರೋನನು ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
31
ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
32
ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನವನ್ನು ಅನುಸರಿಸಿ ಬೇರೆ ಕಾರ್ಯಕ್ಕಾಗಿ ತೈಲವನ್ನು ತಯಾರಿಸಲೇ ಕೂಡದು. ಇದು ದೇವರ ವಸ್ತು. ಇದು ಮೀಸಲೆಂದು ನೀವು ತಿಳಿದುಕೊಳ್ಳಬೇಕು.
33
ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.
34
ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ
35
ಪರಿಮಳದ್ರವ್ಯಕಾರರು ಮಾಡುವಂತೆ ಕಲಸಿ, ಉಪ್ಪು ಹಾಕಿ, ದೇವರ ಸೇವೆಗೆ ಸ್ವಚ್ಚವಾದ ಧೂಪದ್ರವ್ಯವನ್ನು ಮಾಡಿಸಬೇಕು.
36
ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನ ಗುಡಾರದೊಳಗೆ ಆಜ್ಞಾಶಾಸನಗಳಿರುವ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.
37
ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತ ಉಪಯೋಗಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಸರ್ವೇಶ್ವರನಾದ ನನ್ನ ಸೇವೆಗೆ ಮಾತ್ರ ಉಪಯೋಗಿಸಬೇಕಾದ, ಮೀಸಲಾದ ಪದಾರ್ಥವೆಂದು ಭಾವಿಸಬೇಕು.
38
ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”
← Chapter 29
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 31 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40