bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezekiel 33
Ezekiel 33
Kannada Bible (KNCL) BSI 2016
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 34 →
1
ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:
2
“ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು
3
ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು
4
ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.
5
ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.
6
ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.
7
“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.
8
ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.
9
ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.
10
“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?
11
ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.
12
“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.
13
ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.
14
ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು
15
ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.
16
ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರದು; ನ್ಯಾಯನೀತಿಗಳನ್ನು ನಡೆಸುತ್ತಿರುವುದರಿಂದ ಅವನು ಬಾಳೇ ಬಾಳುವನು.
17
“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.
18
ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.
19
ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.
20
ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”
21
ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.
22
ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.
23
ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -
24
“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.
25
“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?
26
ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’
27
“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.
28
ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.
29
ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.
30
“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.
31
ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.
32
ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.
33
ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 34 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48