bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezekiel 34
Ezekiel 34
Kannada Bible (KNCL) BSI 2016
← Chapter 33
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 35 →
1
ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.
2
“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?
3
ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.
4
ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.
5
ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;
6
ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.
7
“ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ -
8
ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.
9
ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;
10
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.
11
“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.
12
ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;
13
ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು;
14
ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.
15
ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.
16
“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”
17
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.
18
(ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?
19
ನೀವು ತುಳಿದು ಕಾಲ ಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು. ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.
20
“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.
21
ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;
22
ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.
23
“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.
24
ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.
25
ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
26
ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.
27
ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.
28
ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.
29
ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.
30
ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.
31
ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.
← Chapter 33
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 35 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48