bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezra 4
Ezra 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 5 →
1
ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.
2
ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.
3
ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು.
4
ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು.
5
ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು.
6
ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.
7
ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.
8
ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಜೆರುಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.
9
“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.
10
ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:
11
ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:
12
ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.
13
ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.
14
ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.
15
ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.
16
ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.”
17
ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು;
18
ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು.
19
ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದ್ರೋಹಮಾಡುತ್ತಾ,
20
ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.
21
ಆದುದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಿ ಬಿಡಬಾರದೆಂತಲೂ ಪ್ರಕಟಿಸಿರಿ.
22
ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿ.”
23
ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.
24
ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 5 →
All chapters:
1
2
3
4
5
6
7
8
9
10