bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezra 5
Ezra 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 6 →
1
ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.
2
ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.
3
ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.
4
ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು.
5
ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.
6
ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.
7
ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:
8
“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.
9
ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು.
10
ಮತ್ತು ಅವರಲ್ಲಿ ಮುಖ್ಯಸ್ಥರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕಾಗಿ ಅವರ ಹೆಸರುಗಳನ್ನು ಕೇಳಿದೆವು.
11
ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.
12
ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.
13
ಆದರೆ ಬಾಬಿಲೋನಿನ ಅರಸ ಸೈರಸನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಈ ದೇವಾಲಯವನ್ನು ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.
14
ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.
15
ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು.
16
ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.
17
“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 6 →
All chapters:
1
2
3
4
5
6
7
8
9
10