bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Ezra 7
Ezra 7
Kannada Bible (KNCL) BSI 2016
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 8 →
1
ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;
2
ಇವನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ;
3
ಇವನು ಅಮರ್ಯನ ಮಗ; ಇವನು ಅಜರ್ಯನ ಮಗ; ಇವನು ಮೆರಾಯೋದನ ಮಗ; ಇವನು ಜೆರಹ್ಯನ ಮಗ;
4
ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ;
5
ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.
6
ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.
7
ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು.
8
ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು.
9
ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು.
10
ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.
11
ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:
12
“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,
13
ನನ್ನ ರಾಜ್ಯದಲ್ಲಿರುವ ಇಸ್ರಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರು ಯಾರಿಗೆ ಜೆರುಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.
14
ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು.
15
ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,
16
ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.
17
ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.
18
ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು.
19
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಜೆರುಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
20
ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
21
:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
22
ಬೆಳ್ಳಿಯನ್ನು 3400 ಕಿಲೋಗ್ರಾಂ, ಗೋದಿಯನ್ನು 10,000 ಕಿಲೋಗ್ರಾಂ, ದ್ರಾಕ್ಷಾರಸವನ್ನು 200 ಲೀಟರ್, ಎಣ್ಣೆಯನ್ನು 2000 ಲೀಟರ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
23
ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.
24
ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.
25
“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
26
ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”
27
ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:
28
ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 8 →
All chapters:
1
2
3
4
5
6
7
8
9
10