bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Genesis 27
Genesis 27
Kannada Bible (KNCL) BSI 2016
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 28 →
1
ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, \ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.
2
ಇಸಾಕನು ಅವನಿಗೆ, “ನೋಡು, ನಾನು ಮುದುಕನಾಗಿಬಿಟ್ಟೆ. ಯಾವಾಗ ಸಾಯುತ್ತೇನೋ ಗೊತ್ತಿಲ್ಲ;
3
ಆದುದರಿಂದ ನಿನ್ನ ಆಯುಧಗಳನ್ನೂ ಬಿಲ್ಲುಬತ್ತಳಿಕೆಗಳನ್ನೂ ತೆಗೆದುಕೊಂಡು ಕಾಡಿಗೆ ಹೋಗು; ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ;
4
ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.
5
ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿದ್ದಿತು. ಏಸಾವನು ಬೇಟೆಯಾಡಲು ಕಾಡಿಗೆ ಹೋಗಿದ್ದಾಗ,
6
ಆಕೆ ತನ್ನ ಮಗ ಯಕೋಬನಿಗೆ, “ನಿನ್ನ ತಂದೆ ನಿನ್ನಣ್ಣ ಏಸಾವನ ಸಂಗಡ ಮಾತನಾಡುತ್ತಾ,
7
ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ, ಅದರಿಂದ ನನಗೆ ಸವಿ ಊಟವನ್ನು ಅಣಿಮಾಡಿ ಬಡಿಸು; ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮನಸಾರೆ ಆಶೀರ್ವದಿಸುತ್ತೇನೆ,’ ಎಂದು ಹೇಳಿದ್ದನ್ನು ಕೇಳಿದ್ದೇನೆ.
8
ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನಾನು ಹೇಳುವಂತೆ ಮಾಡು:
9
ಮೇಕೆ ಮಂದೆಯ ಬಳಿಗೆ ಹೋಗಿ ಎರಡು ಒಳ್ಳೆಯ ಮೇಕೆಮರಿಗಳನ್ನು ಬೇಗನೆ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ಸವಿಯೂಟವನ್ನು ನಾನೇ ಅಣಿಮಾಡುತ್ತೇನೆ.
10
ನೀನು ಅದನ್ನು ಅವರ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹಾಗೆ ಮಾಡಿದರೆ ಅವರು ಸಾಯುವುದಕ್ಕೆ ಮುಂಚೆ ನಿನ್ನನ್ನೇ ಮನಸಾರೆ ಆಶೀರ್ವದಿಸುವರು,” ಎಂದಳು.
11
ಅದಕ್ಕೆ ಯಕೋಬನು, “ನನ್ನ ಅಣ್ಣನ ಮೈ ತುಂಬ ರೋಮಗಳಿವೆ. ನನ್ನ ಮೈ ಆದರೋ ನುಣ್ಣಗಿದೆ;
12
ಒಂದು ವೇಳೆ ತಂದೆ ನನ್ನನ್ನು ಮುಟ್ಟಿನೋಡಿಯಾರು; ನಾನು ಅವರಿಗೆ ವಂಚಕನಾಗಿ ತೋರಿಬಂದರೆ ಆಶೀರ್ವಾದಕ್ಕೆ ಬದಲಾಗಿ ಶಾಪ ಬರಮಾಡಿಕೊಳ್ಳುತ್ತೇನೆ,” ಎಂದನು.
13
ಆಗ ಅವನ ತಾಯಿ, “ಮಗನೇ, ಅವರು ನಿನಗೆ ಶಾಪ ಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ,” ಎಂದಳು.
14
ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾದ ಸವಿ ಊಟವನ್ನು ಸಿದ್ಧಪಡಿಸಿದಳು.
15
ತನ್ನ ಹಿರಿಯ ಮಗ ಏಸಾವನ ಬಟ್ಟೆಗಳಲ್ಲಿ ಶ್ರೇಷ್ಠವಾದವು ಮನೆಯಲ್ಲಿ ಆಕೆಯ ವಶದಲ್ಲಿದ್ದವು. ಅವುಗಳನ್ನು ತೆಗೆದು ಕಿರಿಯ ಮಗ ಯಕೋಬನಿಗೆ ತೊಡಿಸಿದಳು
16
ಮೇಕೆಮರಿಗಳ ಚರ್ಮವನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿದಳು.
17
ತಾನು ಸಿದ್ಧಮಾಡಿದ್ದ ಸವಿಯೂಟವನ್ನೂ ಸುಟ್ಟಿದ್ದ ರೊಟ್ಟಿಯನ್ನೂ ತನ್ನ ಮಗ ಯಕೋಬನ ಕೈಗೆ ಕೊಟ್ಟಳು.
18
ಯಕೋಬನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ತಂದೆಯು, “ಏನು ಮಗನೇ, ನೀನು ಯಾವ ಮಗನು?” ಎಂದು ಕೇಳಿದನು.
19
ಯಕೋಬನು, “ನಾನೇ ನಿಮ್ಮ ಹಿರಿಯ ಮಗ ಏಸಾವನು; ನಿಮ್ಮ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕುಳಿತುಕೊಂಡು ನಾನು ತಂದಿರುವ ಬೇಟೆಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಹೇಳಿದನು.
20
ಇಸಾಕನು, “ಏನು ಮಗನೇ, ಇಷ್ಟು ಬೇಗನೆ ಬೇಟೆ ಹೇಗೆ ಸಿಕ್ಕಿತು?” ಎಂದು ಕೇಳಿದನು. ಯಕೋಬನು, “ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನನ್ನೆದುರಿಗೆ ಬರಮಾಡಿದರು,” ಎಂದನು.
21
ಆಗ ಇಸಾಕನು ಅವನಿಗೆ, “ಮಗನೇ, ಹತ್ತಿರಕ್ಕೆ ಬಾ; ನೀನು ನನ್ನ ಮಗನೋ ಅಲ್ಲವೋ, ಎಂದು ಮುಟ್ಟಿ ತಿಳಿದುಕೊಳ್ಳಬೇಕು,” ಎಂದನು.
22
ಯಕೋಬನು ಹತ್ತಿರಕ್ಕೆ ಬಂದಾಗ ತಂದೆ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಕೋಬನ ಸ್ವರ; ಆದರೆ ಕೈ ಏಸಾವನ ಕೈ,” ಎಂದುಕೊಂಡನು.
23
ಯಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.
24
ಆದರೂ ಮರಳಿ, “ನೀನು ನಿಶ್ಚಯವಾಗಿ ನನ್ನ ಮಗ ಏಸಾವನೋ” ಎಂದು ಕೇಳಿದನು. ಯಕೋಬನು “ಹೌದು,” ಎಂದು ಉತ್ತರಕೊಟ್ಟನು.
25
ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.
26
ಬಳಿಕ ಅವನ ತಂದೆ ಇಸಾಕನು, “ಮಗನೇ, ಹತ್ತಿರ ಬಂದು ನನಗೆ ಮುತ್ತು ಕೊಡು,” ಎಂದನು. ಅವನು ಹತ್ತಿರ ಬಂದು ಮುದ್ದಿಟ್ಟಾಗ
27
ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.
28
ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.
29
ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”
30
ಯಕೋಬನು ತಂದೆ ಇಸಾಕನಿಂದ ಆಶೀರ್ವಾದ ಪಡೆದು ಹೊರಟುಹೋದನು. ಕೂಡಲೆ ಅವನ ಅಣ್ಣ ಏಸಾವನು ಬೇಟೆಯಿಂದ ಹಿಂದಿರುಗಿ ಬಂದನು.
31
ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು.
32
“ನೀನು ಯಾರು?” ಎಂದು ತಂದೆ ಇಸಾಕನು ವಿಚಾರಿಸಲು, “ನಾನೇ ನಿಮ್ಮ ಜ್ಯೇಷ್ಠಪುತ್ರ ಏಸಾವನು” ಎಂದು ಉತ್ತರಕೊಟ್ಟನು.
33
ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.
34
ತಂದೆಯ ಈ ಮಾತುಗಳನ್ನು ಕೇಳಿ ಏಸಾವನು ದುಃಖಕ್ರಾಂತನಾದನು. ಬಹಳವಾಗಿ ಅತ್ತನು. “ಅಪ್ಪಾ, ತಂದೆಯೇ ನನ್ನನ್ನು, ನನ್ನನ್ನು ಕೂಡ ಆಶೀರ್ವದಿಸು,” ಎಂದು ಬೇಡಿಕೊಂಡನು.
35
ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು.
36
ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.
37
ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.
38
“ಅಪ್ಪಾ, ನಿಮ್ಮಲ್ಲಿ ಒಂದೇ ಆಶೀರ್ವಾದ ಮಾತ್ರ ಇತ್ತೋ? ನನ್ನನ್ನು, ನನ್ನನ್ನು ಕೂಡ ಆಶೀರ್ವಾದ ಮಾಡಪ್ಪಾ,” ಎಂದು ಗೋಳಾಡುತ್ತಾ ಅತ್ತನು.
39
ಆಗ ಇಸಾಕನು - \ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ.
40
ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”
41
ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.
42
ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ.
43
ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.
44
ಕೆಲವು ಕಾಲ, ಅಂದರೆ ನಿನ್ನಣ್ಣನ ಕೋಪ ಶಮನ ಆಗುವವರೆಗೂ, ಅವನ ಬಳಿಯಲ್ಲೇ ಇರು.
45
ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು.
46
ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.
← Chapter 26
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 28 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
Recommended Reading
Commentary
Genesis Commentaries
→
Devotional
Genesis Devotional Guide
→
Get This Bible
KNCL Study Bible
→