bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Hebrews 5
Hebrews 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 6 →
1
ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.
2
ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.
3
ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ.
4
ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.
5
ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.
6
ಅವರೇ ಮತ್ತೊಂದು ಕಡೆಯಲ್ಲಿ: “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.
7
ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.
8
ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು.
9
ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.
10
ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.
11
ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.
12
ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.
13
ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.
14
ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 6 →
All chapters:
1
2
3
4
5
6
7
8
9
10
11
12
13
Recommended Reading
Commentary
Hebrews Commentaries
→
Devotional
Hebrews Devotional Guide
→
Get This Bible
KNCL Study Bible
→