bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
John 20
John 20
Kannada Bible (KNCL) BSI 2016
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 21 →
1
ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.
2
ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.
3
ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.
4
ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು.
5
ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ.
6
ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು.
7
ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.
8
ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.
9
ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.
10
ತರುವಾಯ ಆ ಶಿಷ್ಯರು ತಮ್ಮ ಮನೆಗೆ ಹಿಂದಿರುಗಿದರು.
11
ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು.
13
ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.
14
ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ.
15
ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.
16
ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).
17
ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.
18
ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, “ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು,” ಎಂದು ತಿಳಿಸಿದಳು.
19
ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.
20
“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.
21
ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.
22
ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.
23
ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.
24
ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ.
25
ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.
26
ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.
27
ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.
28
ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.
29
ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.
30
ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ.
31
ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21