bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Joshua 12
Joshua 12
Kannada Bible (KNCL) BSI 2016
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
1
ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
2
ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,
3
ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.
4
ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.
5
ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.
6
ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.
7
ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,
8
ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:
9
ಜೆರಿಕೋವಿನ ಅರಸ - 1 ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸ - 1
10
ಜೆರೂಸಲೇಮಿನ ಅರಸ - 1 ಹೆಬ್ರೋನಿನ ಅರಸ - 1 ಯರ್ಮೂತಿನ ಅರಸ - 1
11
ಲಾಕೀಷಿನ ಅರಸ - 1 ಎಗ್ಲೋನಿನ ಅರಸ - 1
12
ಗೆಜೆರಿನ ಅರಸ - 1
13
ದೆಬೀರಿನ ಅರಸ - 1
14
ಗೆದೆರಿನ ಅರಸ - 1 ಹೊರ್ಮದ ಅರಸ - 1 ಅರಾದಿನ ಅರಸ - 1
15
ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1
16
ಮಕ್ಕೇದದ ಅರಸ - 1 ಬೇತೇಲಿನ ಅರಸ - 1
17
ತಪ್ಪೂಹದ ಅರಸ - 1 ಹೇಫೆರಿನ ಅರಸ - 1
18
ಅಷ್ಟಾರೋನಿನ ಅರಸ - 1 ಅಫೇಕದ ಅರಸ - 1
19
ಮಾದೋನಿನ ಅರಸ - 1 ಹಾಚೋರಿನ ಅರಸ - 1 ಶಿಮ್ರೋನ್ಮೆರೋನಿನ ಅರಸ - 1
20
ಅಕ್ಷಾಫಿನ ಅರಸ - 1 ತಾನಕದ ಅರಸ - 1
21
ಮೆಗಿದ್ದೋವಿನ ಅರಸ - 1 ಕೆದೆಷಿನ ಅರಸ - 1
22
ಕರ್ಮೆಲ್ ಬೆಟ್ಟದ ಮೇಲಿರುವ ಯೊಕ್ನೆಯಾಮದ ಅರಸ - 1
23
ದೋರ್ ಬೆಟ್ಟದ ಮೇಲಿರುವ ದೋರಿನ ಅರಸ - 1 ಗಿಲ್ಗಾಲಿನವರ ಅರಸ - 1 ತಿರ್ಚದ ಅರಸ - 1
24
ಒಟ್ಟು ಅರಸರು 31 ಮಂದಿ.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24