bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Judges 11
Judges 11
Kannada Bible (KNCL) BSI 2016
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 12 →
1
ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.
2
ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
3
ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು.
4
ಇಸ್ರಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪ ದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.
5
ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.
6
ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು,” ಎಂದು ಬೇಡಿಕೊಂಡರು.
7
ಅವನು ಅವರಿಗೆ, “ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೇ? ನಿಮಗೆ ಕಷ್ಟಬಂದಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.
8
ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು.
9
ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕಾಗಿ ಕರೆದುಕೊಂಡು ಹೋಗುವುದಾದರೆ ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನೀವು ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಿದನು.
10
ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.
11
ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.
12
ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧ ಮಾಡುವುದಕ್ಕೇನು ಕಾರಣ?” ಎಂದು ಕೇಳಿದನು.
13
ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.
14
ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ,
15
“ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
16
ಅವರು ಈಜಿಪ್ಟರ ನಾಡನ್ನು ಬಿಟ್ಟ ನಂತರ ಮರುಭೂಮಿಯಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
17
ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ಹೋಗುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನು ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ನಿಂತರು.
18
ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.
19
ಬಳಿಕ ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ಅವರು ದೂತರನ್ನು ಕಳುಹಿಸಿ, “ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು,” ಎಂದು ಅವನನ್ನು ಬೇಡಿಕೊಂಡರು.
20
ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
21
ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.
22
ಹೀಗೆ ಇಸ್ರಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.
23
“ಇಸ್ರಯೇಲರ ದೇವರಾದ ಸರ್ವೇಶ್ವರ ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?
24
ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.
25
ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೇ? ಅವನು ಇಸ್ರಯೇಲರೊಡನೆ ಎಂದಾದರೂ ವಿವಾದಮಾಡಿದನೇ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೇ?
26
ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
27
ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.
28
ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.
29
ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
30
ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, “ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ
31
ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.
32
ಯೆಪ್ತಾಹನು ನದಿಯನ್ನು ದಾಟಿ ಅಮ್ಮೋನಿಯರಿಗೆ ವಿರುದ್ಧ ಯುದ್ಧಕ್ಕೆ ಹೋಗಲು ಅವರನ್ನು ಸರ್ವೇಶ್ವರ ಅವನ ಕೈಗೆ ಒಪ್ಪಿಸಿದರು.
33
ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು.
34
ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.
35
ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.
36
ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು.
37
ಆಕೆ ಪುನಃ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಆಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು, ನಾನು ನನ್ನ ಗೆಳತಿಯರೊಡನೆ ಗುಡ್ಡಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗಾಗಿ ಗೋಳಾಡುವೆನು,” ಎಂದಳು. ಅವನು, “ಎರಡು ತಿಂಗಳ ತನಕ ಹೋಗಿ ಬಾ,” ಎಂದು ಹೇಳಿ ಕಳುಹಿಸಿದನು.
38
ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು.
39
ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.
40
ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21