bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Judges 12
Judges 12
Kannada Bible (KNCL) BSI 2016
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 13 →
1
ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.
2
ಅದಕ್ಕೆ ಅವನು, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆ; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.
3
ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.
4
ಬಳಿಕ ಗಿಲ್ಯಾದಿನವರೆಲ್ಲರನ್ನು ಕೂಡಿಸಿ, ಎಫ್ರಯಿಮರಿಗೆ ವಿರುದ್ಧ ಯುದ್ಧಕ್ಕೆ ನಿಂತನು. “ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆ ಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿಬಂದಿರಿ” ಎಂದು ಎಫ್ರಯಿಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.
5
ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.
6
ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.
7
ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಯೇಲರನ್ನು ಆರು ವರ್ಷ ಪಾಲಿಸಿದನಂತರ ಸತ್ತನು. ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.
8
ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.
9
ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು ಗಂಡುಮಕ್ಕಳಿಗಾಗಿ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.
10
ಇವನು ಇಸ್ರಯೇಲರನ್ನು ಏಳು ವರ್ಷ ಪಾಲಿಸಿದ ನಂತರ ಮೃತನಾದನು. ಅವನ ಶವವನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.
11
ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಯೇಲರ ಪಾಲಕನಾಗಿ ಹತ್ತು ವರ್ಷಗಳವರೆಗೆ ಅವರನ್ನು ಪಾಲಿಸಿದ ನಂತರ ಮರಣ ಹೊಂದಿದನು.
12
ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.
13
ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರ ಪಾಲಕನಾದನು.
14
ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.
15
ಅವನ ಶವವನ್ನು ಎಫ್ರಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21