bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Judges 16
Judges 16
Kannada Bible (KNCL) BSI 2016
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 17 →
1
ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.
2
ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.
3
ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರಬಾಗಿಲುಗಳನ್ನೂ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಬೆಟ್ಟದ ತುದಿಯ ಮೇಲೆ ಇಟ್ಟನು.
4
ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.
5
ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.
6
ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.
7
ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.
8
ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು.
9
ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿಸಿ, “ಸಂಸೋನರೇ, ನಿಮ್ಮ ಮೇಲೆ ಫಿಲಿಷ್ಟಿಯರು ಬಂದರು,” ಎಂದು ಕೂಗಿದಳು. ಅವನು ಬೆಂಕಿ ತಗಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆಹೋಯಿತು.
10
ದೆಲೀಲಳು ಮತ್ತೊಮ್ಮೆ ಸಂಸೋನನಿಗೆ, “ನೀವು ನನ್ನನ್ನು ವಂಚಿಸಿದಿರಿ; ಸುಳ್ಳಾಡದೆ ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.
11
ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.
12
ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
13
ಆಗ ದೆಲೀಲಳು ಸಂಸೋನನಿಗೆ, “ನೀವು ತಿರುಗಿ ನನ್ನನ್ನು ವಂಚಿಸಿದಿರಿ, ಸುಳ್ಳಾಡಿದಿರಿ; ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸಿ,” ಎನ್ನಲು ಅವನು, “ನನ್ನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಸಾಕು,” ಎಂದು ಹೇಳಿದನು.
14
ಅವಳು ಅವನ ತಲೆಗೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
15
ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.
16
ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.
17
ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.
18
ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
19
ಆಕೆ ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು.
20
ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.
21
ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.
22
ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯತೊಡಗಿದವು.
23
ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.
24
ಜನರು ಸಂಸೋನನನ್ನು ನೋಡಿ: ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.
25
ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.
26
ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುತ್ತಿದ್ದ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ,” ಎಂದನು.
27
ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
28
ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.
29
ಆ ಮನೆಯ ಆಧಾರ ಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅವುಗಳನ್ನು ಒತ್ತಿ,
30
“ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.
31
ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಸ್ಥಾಪನೆಮಾಡಿದರು. ಅವನು ಇಸ್ರಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದನು
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21