bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Judges 19
Judges 19
Kannada Bible (KNCL) BSI 2016
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 20 →
1
ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.
2
ಈಕೆ ಇವನನ್ನು ಬಿಟ್ಟು ವೇಶ್ಯೆಯಾಗಿ ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತೌರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
3
ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ಮತ್ತೆ ಮನೆಗೆ ಕರೆದು ತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆ ಅವನನ್ನು ತನ್ನ ತೌರುಮನೆಯಲ್ಲಿ ಸೇರಿಸಿಕೊಂಡಳು. ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.
4
ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
5
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು.
6
ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು.
7
ಆದರೆ ಅವನ ಮಾವ ಬಹಳ ಬಲಾತ್ಕಾರ ಮಾಡಿದ್ದರಿಂದ ಆ ರಾತ್ರಿ ಅಲ್ಲೇ ತಂಗಿದರು.
8
ಅವನು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆ, “ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ವಿಶ್ರಮಿಸಿಕೋ,” ಎಂದು ಅವನನ್ನು ಬೇಡಿಕೊಳ್ಳಲು ಅವನು ಮತ್ತೆ ಊಟಕ್ಕೆ ನಿಂತನು.
9
ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು.
10
ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.
11
ಅವರು ಯೆಬೂಸಿಯರ ಊರಾದ ಜೆರುಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತು ಮುಳುಗುವ ಕಾಲವಾದುದರಿಂದ ಸೇವಕನು ದಣಿಗೆ, “ದಯವಿಟ್ಟು ಬನ್ನಿ, ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ,” ಎಂದನು.
12
ಆಗ ಆ ದಣಿ, “ನಾವು ಇಸ್ರಯೇಲರಲ್ಲದ ಅನ್ಯರ ಪಟ್ಟಣದಲ್ಲಿ ತಂಗಬಾರದು; ಗಿಬೆಯಕ್ಕೆ ಹೋಗೋಣ,” ಎಂದನು.
13
ಅವನು ಮತ್ತೆ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ದಾಮದಲ್ಲಾಗಲಿ ತಂಗೋಣ ಬಾ,” ಎಂದನು.
14
ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.
15
ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು.
16
ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.
17
ಈ ಮುದುಕ, ಬೀದಿಯಲ್ಲಿ ಕುಳಿತಿದ್ದ ಆ ದಾರಿಗನನ್ನು ಕಂಡು, “ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.
18
ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.
19
ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ. ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ,” ಎಂದು ಹೇಳಿದನು.
20
ಆಗ ಆ ಮುದುಕ, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
21
ಈ ಬೀದಿಯಲ್ಲಿ ರಾತ್ರಿಯನ್ನು ಕಳೆಯಬೇಡ; ನನ್ನ ಮನೆಗೆ ಬಾ,” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವುಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
22
ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.
23
ಆಗ ಆ ಮುದುಕ ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನ ಮಾಡಬೇಡಿ.
24
ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು.
25
ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದರು. ಆದುದರಿಂದ ಆ ಲೇವಿಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ರಾತ್ರಿಯೆಲ್ಲಾ ಬಹುಕ್ರೂರತನದಿಂದ ನಡಿಸಿ, ಕೋಳಿ ಕೂಗುವ ಹೊತ್ತಾಗಲು ಬಿಟ್ಟುಹೋದರು.
26
ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ.
27
ಆಕೆಯ ಪತಿ ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆದಾಗ ತನ್ನ ಉಪಪತ್ನಿ ಬಾಗಿಲ ಮುಂದೆ ಬಿದ್ದಿರುವುದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವುದನ್ನೂ ಕಂಡನು.
28
ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.
29
ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.
30
ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21