bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Lamentations 5
Lamentations 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
1
ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.
2
ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.
3
ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.
4
ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ.
5
ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ.
6
ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.
7
ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.
8
ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!
9
ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.
10
ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.
11
ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ!
12
ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.
13
ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ.
14
ಮುದುಕರು ಇನ್ನು ಕೂರುತ್ತಿಲ್ಲ ಚಾವಡಿಗಳಲಿ ಯುವಕರು ಇನ್ನು ಹಿಡಿಯುತ್ತಿಲ್ಲ ವಾದ್ಯಗಳನ್ನು ಕೈಯಲ್ಲಿ.
15
ಸಂತೋಷವು ನಮ್ಮ ಹೃದಯದಿಂದ ಮಾಯವಾಗಿದೆ ನಮ್ಮ ನಾಟ್ಯನಲಿವು ದುಃಖಕರವಾಗಿ ಮಾರ್ಪಟ್ಟಿದೆ.
16
ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.
17
ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.
18
ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.
19
ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!
20
ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?
21
ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?
22
ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
All chapters:
1
2
3
4
5
Recommended Reading
Commentary
Lamentations Commentaries
→
Devotional
Lamentations Devotional Guide
→
Get This Bible
KNCL Study Bible
→