bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 14
Leviticus 14
Kannada Bible (KNCL) BSI 2016
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 15 →
1
ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -
2
ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯದಲ್ಲಿ ಅನುಸರಿಸಬೇಕಾದ ಕ್ರಮ ಇದು: ಅವನನ್ನು ಯಾಜಕನಿಗೆ ತೋರಿಸಬೇಕು.
3
ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ
4
ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸಜೀವವಾದ ಎರಡು ಶುದ್ಧಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
5
ಆ ಪಕ್ಷಿಗಳಲ್ಲಿ ಒಂದನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ, ಮತ್ತೊಂದು ಪಕ್ಷಿಯನ್ನೂ
6
ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ
7
ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
8
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.
9
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.
10
ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.
11
ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ
12
ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.
13
ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು;
14
ಆಗ ಯಾಜಕನು ಆ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
15
ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದಕೊಂಡು
16
ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
17
ಅವನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಿ
18
ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
19
ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು.
20
ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
21
ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.
22
ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.
23
ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
24
ಯಾಜಕನು ಪ್ರಾಯಶ್ಚಿತ್ತ ಬಲಿಯ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು.
25
ಪ್ರಾಯಶ್ಚಿತ್ತ ಬಲಿಯ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
26
ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು
27
ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಸರ್ವೇಶ್ವರನ ಸನ್ನಿಧಿಯಲ್ಲಿ ಚಿಮುಕಿಸಬೇಕು.
28
ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಿಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
29
ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
30
ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ
31
ಪಾರಿವಾಳದ ಮರಿಗಳಲ್ಲಿಯಾಗಲಿ ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಿಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
32
ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು.
33
ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ -
34
“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ
35
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - “ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಇರುವಂತೆ ತೋರುತ್ತದೆ,” ಎಂದು ಅವನಿಗೆ ತಿಳಿಸಬೇಕು.
36
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮುಂಚೆ ಆ ಮನೆಯನ್ನು ಬರಿದು ಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದು ಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುವುವು. ಬರಿದು ಮಾಡಿದ ಮೇಲೆ ಯಾಜಕನು ಆ ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.
37
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಯಾಜಕನು ಹೊರಗೆ ಬಂದು
38
ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
39
ಏಳನೆಯ ದಿನದಲ್ಲಿ ಯಾಜಕನು ಬಂದು ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ
40
ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
41
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ, ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
42
ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.
43
ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.
44
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
45
ಅವನು ಆ ಮನೆಯನ್ನು ಕೆಡವಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
46
ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.
47
ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
48
ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
49
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒಂದು ಪಕ್ಷಿಯನ್ನು
50
ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ
51
ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
52
ಹಾಗೆ ಆ ಪಕ್ಷಿಯ ರಕ್ತ, ಒರತೆ ನೀರು, ಸಜೀವಪಕ್ಷಿ, ದೇವದಾರಿನ ಆ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿ ಮಾಡುವನು.
53
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗಾಗಿ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
54
ನಾನಾ ವಿಧವಾದ ಕುಷ್ಠರೋಗದ ಗುರುತುಗಳು, ಅಂದರೆ ಕೂದಲು ಬೆಳೆಯದ ಇಸಬು,
55
ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠರೋಗದ ಗುರುತು,
56
ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
57
ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27