bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Leviticus 15
Leviticus 15
Kannada Bible (KNCL) BSI 2016
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 16 →
1
ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:
2
“ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು.
3
ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
4
ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ.
5
ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.
6
ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
7
ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
8
ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
9
ಸ್ರಾವವುಳ್ಳವನು ಕುಳಿತಿದ್ದ ತಡಿಯು ಅಶುದ್ಧ.
10
ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
11
ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.
12
ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
13
ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
14
ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15
ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.
16
“ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
17
ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು.
18
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.
19
“ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.
20
ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
21
ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
22
ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
23
ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.
24
ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
25
“ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲದಲ್ಲಿ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ದಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು.
26
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
27
ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.
28
ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.
29
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
30
ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.
31
“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.
32
ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
33
ಮುಟ್ಟಾದ ಮಹಿಳೆ ಸ್ರಾವವುಂಟಾಗುವ ಸ್ತ್ರೀ ಪುರುಷರು ಹಾಗು ಅಶುದ್ಧಳಾದ ಮಹಿಳೆಯನ್ನು ಸಂಗಮಿಸಿದವನು ಇವರ ವಿಷಯವಾದ ನಿಯಮಗಳು ಇವು.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27