bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Luke 16
Luke 16
Kannada Bible (KNCL) BSI 2016
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 17 →
1
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.
2
ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.
3
ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.
4
ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ.
5
ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.
6
ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.
7
ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.
8
“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.
9
ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.
10
ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.
11
ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು?
12
ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?
13
“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.
14
ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.
15
ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.
16
“ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ.
17
“ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.
18
ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”
19
“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.
20
ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು.
21
ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
22
“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.
23
ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.
24
‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.
25
ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.
26
ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.
27
ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು.
28
ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.
29
ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.
30
‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ.
31
ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24