bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Luke 17
Luke 17
Kannada Bible (KNCL) BSI 2016
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 18 →
1
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ!
2
ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.
3
ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.
4
ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.
5
“ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.
6
ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.
7
“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ.
8
ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?
9
ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ.
10
ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.
11
ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದುಹೋಗುತ್ತಿದ್ದರು.
12
ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠರೋಗದಿಂದ ನರಳುತ್ತಿದ್ದ ಹತ್ತುಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು,
13
‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.
14
ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.
15
ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು.
16
ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!
17
ಆಗ ಯೇಸು, “ಹತ್ತುಮಂದಿ ಗುಣಹೊಂದಿದರಲ್ಲವೆ? ಮಿಕ್ಕ ಒಂಬತ್ತು ಮಂದಿ ಎಲ್ಲಿ?
18
ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು.
19
ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.
20
ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.
21
‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.
22
ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.
23
‘ಇಗೋ, ಇಲ್ಲಿದ್ದಾನೆ; ಅಗೋ ಅಲ್ಲಿದ್ದಾನೆ,’ ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ.
24
ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.
25
ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು.
26
ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.
27
ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.
28
ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.
29
ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.
30
ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.
31
“ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ.
32
ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ!
33
“ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.
34
ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು.
35
ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. (
36
ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು ಮತ್ತೊಬ್ಬನನ್ನು ಬಿಡಲಾಗುವುದು)” ಎಂದರು.
37
“ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.
← Chapter 16
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 18 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24