bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Luke 21
Luke 21
Kannada Bible (KNCL) BSI 2016
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 22 →
1
ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು.
2
ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.
3
ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
4
ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.
5
“ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!” ಎಂದು ಕೆಲವರು ಮಾತನಾಡುತ್ತಿದ್ದರು.
6
ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.
7
“ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು.
8
ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.
9
ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು.
10
ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು;
11
ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.
12
ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.
13
ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ.
14
ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.
15
ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.
16
ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.
17
ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.
18
ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ.
19
ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.
20
“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.
21
ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.
22
ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.
23
ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.
24
ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.
25
“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.
26
ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.
27
ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.
28
ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”
29
ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ.
30
ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ.
31
ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ.
32
ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.
33
ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.
34
“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!
35
ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.
36
ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.
37
ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.
38
ಅವರ ಬೋಧನೆಯನ್ನು ಕೇಳಲು ಜನರೆಲ್ಲರೂ ಸೂರ್ಯೋದಯಕ್ಕೆ ಮುಂಚೆಯೇ ಎದ್ದು ದೇವಾಲಯಕ್ಕೆ ಬರುತ್ತಿದ್ದರು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
Recommended Reading
Commentary
Luke Commentaries
→
Devotional
Luke Devotional Guide
→
Get This Bible
KNCL Study Bible
→