bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Micah 4
Micah 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 5 →
1
ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.
2
ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.
3
ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.
4
ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.
5
ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.
6
ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು ಒಂದಾಗಿ ಸೇರಿಸುವೆನು.
7
ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”
8
ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.
9
ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?
10
ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.
11
ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.
12
ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”
13
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 5 →
All chapters:
1
2
3
4
5
6
7
Recommended Reading
Commentary
Micah Commentaries
→
Devotional
Micah Devotional Guide
→
Get This Bible
KNCL Study Bible
→