bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Nehemiah 10
Nehemiah 10
Kannada Bible (KNCL) BSI 2016
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 11 →
1
ಸಹಿಮಾಡಿದವರು ಇವರು: ಹಕಲ್ಯನ ಮಗ ನೆಹೆಮೀಯನೆಂಬ ದೇಶಾಧಿಪತಿ;
2
ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,
3
ಪಷ್ಹೂರ್, ಅಮರ್ಯ, ಮಲ್ಕೀಯ,
4
ಹಟ್ಟೂಷ್, ಶೆಬನ್ಯ, ಮಲ್ಲೂಕ್, ಹಾರಿಮ್, ಮೆರೇಮೋತ್,
6
ಓಬದ್ಯ, ದಾನೀಯೇಲ್, ಗಿನ್ನೆತೋನ್,
7
ಬಾರೂಕ್, ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,
8
ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು;
9
ಲೇವಿಯರಲ್ಲಿ ಅಜನ್ಯನ ಮಗ ಯೇಷೂವ, ಹೇನಾದಾದ್ ವಂಶದವನಾದ ಬೆನ್ನೂಯ್, ಕದ್ಮೀಯೇಲ್ ಎಂಬವರು;
10
ಇವರ ಬಂಧುಗಳಾದ ಶೆಬನ್ಯ,
11
ಹೋದೀಯ, ಕೆಲೀಟ, ಪೆಲಾಯ, ಹಾನಾನ್, ಮೀಕ,
12
ರೆಹೋಬ್, ಹಷಬ್ಯ, ಜಕ್ಕೂರ್, ಶೇರೇಬ್ಯ, ಶೆಬನ್ಯ,
13
ಹೋದೀಯ, ಬಾನೀ, ಬೆನೀನೂ ಎಂಬವರು.
14
ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್,
15
ಏಲಾಮ್, ಜತ್ತೂ, ಬಾನೀ, ಬುನ್ನಿ, ಅಜ್ಗಾದ್,
16
ಬೇಬೈ, ಅದೋನೀಯ, ಬಿಗ್ವೈ, ಆದೀನ್, ಆಟೇರ್,
18
ಹಿಜ್ಕೀಯ, ಅಜ್ಜೂರ್, ಹೋದೀಯ, ಹಾಷುಮ್,
19
ಬೇಚೈ, ಹಾರೀಫ್, ಅನಾತೋತ್, ನೇಬೈ, ಮಗ್ಪೀಯಾಷ್,
21
ಮೆಷುಲ್ಲಾಮ್, ಹೇಜೀರ್, ಮೆಷೇಜಬೇಲ್,
22
ಚಾದೋಕ್, ಯದ್ದೂವ, ಪೆಲಟ್ಯ, ಹಾನಾನ್, ಆನಾಯ, ಹೋಷೇಯ,
23
ಹನನ್ಯ, ಹಷ್ಷೂಬ್,
24
ಹಲೋಹೇಷ್, ಪಿಲ್ಹ, ಶೋಬೇಕ್, ರೆಹೂಮ್,
26
ಹಷಬ್ನ, ಮಾಸೇಯ, ಅಹೀಯ,
27
ಹಾನಾನ್, ಆನಾನ್, ಮಲ್ಲೂಕ್, ಹಾರೀಮ್, ಬಾನ ಎಂಬವರು.
28
ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,
29
ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:
30
‘ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;
31
ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;
32
ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;
33
ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;
34
ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;
35
ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;
36
ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ;
37
ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;
38
ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;
39
ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 11 →
All chapters:
1
2
3
4
5
6
7
8
9
10
11
12
13