bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Nehemiah 12
Nehemiah 12
Kannada Bible (KNCL) BSI 2016
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 13 →
1
ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ: ಯಾಜಕರು -
2
ಸೆರಾಯ, ಯೆರೆಮೀಯ, ಎಜ್ರ, ಅಮರ್ಯ,
3
ಮಲ್ಲೂಕ್, ಹಟ್ಟೂಷ್, ಶೆಕನ್ಯ, ರೆಹುಮ್, ಮೆರೇಮೋತ್, ಇದ್ದೋ,
4
ಗಿನ್ನೆತೋನ್, ಅಬೇಯ,
5
ಮಿಯ್ಯಾಮೀನ್, ಮಾದ್ಯ, ಬಿಲ್ಗ, ಶೆಮಾಯ,
7
ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಮುಖಂಡರಾಗಿದ್ದರು.
8
ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.
9
ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನ ಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು.
10
ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,
11
ಯೋಯಾದನಿಗೆ ಯೋನಾತಾನನು, ಯೋನಾತಾನನಿಗೆ ಯದ್ದೂವನು ಹುಟ್ಟಿದರು.
12
ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - [ಯಾಜಕ] — [ಗೋತ್ರ] ಮೆರಾಯ — ಸೆರಾಯ ಹನನ್ಯ — ಯೆರೆಮೀಯ ಮೆಷುಲ್ಲಾಮ್ — ಎಜ್ರ ಯೆಹೋಹಾನಾನ್ — ಅಮರ್ಯ ಯೋನಾತಾನ್ — ಮಲ್ಲೂಕಿ ಜೋಸೇಫ್ — ಶೆಬನ್ಯ ಅದ್ನ — ಹಾರಿಮ ಹೆಲ್ಕೈ — ಮೆರಾಯೋತ ಜಕರ್ಯ — ಇದ್ದೋ ಮೆಷುಲ್ಲಾಮ್ — ಗಿನ್ನೆತೋನ ಜೆಕ್ರೀ — ಅಬೀಯ ಪಿಲ್ಟೈ — ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ — ಬಿಲ್ಗಾ ಯೆಹೋನಾತಾನ್ — ಶೆಮಾಯ ಮತ್ತೆನೈ — ಯೋಯಾರೀಬ ಉಜ್ಜೀ — ಯೆದಾಯ ಕಲ್ಲೈ — ಸಲ್ಲೈ ಏಬೆರ್ — ಆಮೋಕ ಹಷಬ್ಯ — ಹಿಲ್ಕೀಯ ನೆತನೇಲ್ — ಯೆದಾಯ
22
ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.
23
ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
24
ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ
25
ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.
26
ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.
27
ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.
28
ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ
29
ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.
30
ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.
31
ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.
32
ಅವರ ಹಿಂದೆ ಯೆಹೂದ ಪ್ರಮುಖರು ಅರ್ಧಜನರೊಡನೆ ಹೋದರು; ಹೋಷಾಯನು
33
ತುತೂರಿ ಹಿಡಿದಿರುವ ಯಾಜಕರೊಡನೆ
34
ಅಜರ್ಯ, ಎಜ್ರ, ಮೆಷುಲ್ಲಾಮ್, ಯೆಹೂದ್ಯ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬವರು ಹೋದರು.
35
ಅವರೊಂದಿಗೆ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ
36
ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು.
37
ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.
38
ಅವರನ್ನು ಎದುರುಗೊಳ್ಳುವ ಹಾಗೆ ಭಜನೆಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲ ಗೋಡೆಯವರೆಗೂ
39
ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.
40
ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ
41
ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ,
42
ಜೆಕರ್ಯ, ಹನನ್ಯ ಇವರೂ, ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು.
43
ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.
44
ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.
45
ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿ ಹಾಗು ಶುದ್ಧೀಕರಣ ಸಂಬಂಧದಲ್ಲಿ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.
46
ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು.
47
ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 13 →
All chapters:
1
2
3
4
5
6
7
8
9
10
11
12
13