bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Nehemiah 3
Nehemiah 3
Kannada Bible (KNCL) BSI 2016
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 4 →
1
ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.
2
ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಜೆರಿಕೋವಿನವರು; ಆಚೆಗೆ ಇಮ್ರಿಯ ಮಗನಾದ ಜಕ್ಕೂರನು.
3
ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.
4
ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗ ಚಾದೋಕ್; ಮುಂದಕ್ಕೆ ತೆಕೋವದವರು.
5
ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.
6
ಹಳೆಯದು ಎಂಬ ಬಾಗಿಲನ್ನು ದುರಸ್ತಿಮಾಡಿದವರು ಪಾಸೇಹನ ಮಗ ಯೋಯಾದನು ಹಾಗು ಬೆಸೋದ್ಯನ ಮಗ ಮೆಷುಲ್ಲಾಮನು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.
7
ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿಮಾಡಿದರು.
8
ಇವರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್; ಆಮೇಲೆ ಬುಕ್ಕಿಟ್ಟುಗಾರರ ಹನನ್ಯ; ಇವರು ಅಗಲಗೋಡೆಯೆನಿಸಿಕೊಳ್ಳುವ ಗೋಡೆಯ ಆಚೆಗಿರುವ ಜೆರುಸಲೇಮಿನ ಭಾಗವನ್ನು ಗೋಡೆಯೊಳಗೆ ಸೇರಿಸಲಿಲ್ಲ.
9
ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.
10
ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್,
11
ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಸರಿಪಡಿಸಿದವರು ಹಾರೀಮನ ಮಗ ಮಲ್ಕೀಯನು ಹಾಗು ಪಹತ್ ಮೋವಾಬ್ಯನಾದ ಹಷೂಬನು.
12
ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.
13
ಕಣಿವೆಯ ಬಾಗಿಲನ್ನು ಸರಿಪಡಿಸಿದವರು ಹಾನೂನನು ಹಾಗು ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.
14
ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.
15
ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.
16
ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.
17
ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.
18
ಇವರ ಆಚೆ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬಲ್ವೈ.
19
ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಸರಿಪಡಿಸಿದನು.
20
ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ, ಜಕ್ಕೈಯ ಮಗನಾದ ಬಾರೂಕನು ಆಸಕ್ತಿ ಇಂದ ಭದ್ರಪಡಿಸಿದನು.
21
ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು.
22
ಮುಂದಿನ ಭಾಗವನ್ನು ಕಟ್ಟಿದವರು ಜೋರ್ಡನ್ ನದಿಯ ಕಣಿವೆಯಲ್ಲಿ ವಾಸಿಸುತ್ತಿದ್ದ ಯಾಜಕರು.
23
ಇವರ ಆಚೆ, ಬೆನ್ಯಾಮೀನ್ ಹಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ದುರಸ್ತಿಮಾಡಿಸಿದರು. ಇವರ ಆಚೆ, ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ: ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಸರಿಪಡಿಸಿದನು.
24
ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ದುರಸ್ತಿಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.
25
ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗ ಪೆದಾಯನೂ ಸರಿಪಡಿಸಿದರು.
26
ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.
27
ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು.
28
ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.
29
ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.
30
ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.
31
ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಿಲಿನ ಎದುರಿನಲ್ಲಿರುವ ದೇವಸ್ಥಾನ ಪರಿಚಾರಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ದುರಸ್ತಿಮಾಡಿದನು.
32
ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 4 →
All chapters:
1
2
3
4
5
6
7
8
9
10
11
12
13