bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Nehemiah 5
Nehemiah 5
Kannada Bible (KNCL) BSI 2016
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 6 →
1
ಕೆಲವು ದಿನಗಳ ನಂತರ ಜನಸಾಮಾನ್ಯರು ಹಾಗು ಅವರ ಹೆಂಡತಿಯರು ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧ ಕಟುವಾಗಿ ಗುಣುಗುಟ್ಟತೊಡಗಿದರು.
2
ಕೆಲವರು, “ನಮಗೆ ಗಂಡುಹೆಣ್ಣು ಮಕ್ಕಳು ಬಹುಮಂದಿ ಇದ್ದಾರೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳಬೇಕಾಗಿ ಇದೆ,” ಎಂದರು.
3
ಇನ್ನು ಕೆಲವರು, “ನಮ್ಮ ಹೊಲ, ತೋಟ, ಮನೆಗಳನ್ನು ಅಡವು ಇಟ್ಟಾಯಿತು; ಹಾಗೆ ಮಾಡಿಯಾದರೂ ಈ ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಬೇಕಾಗಿದೆ,” ಎಂದರು.
4
ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;
5
ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.
6
ಅವರ ಬೊಬ್ಬೆಯನ್ನೂ ಟೀಕೆಗಳನ್ನೂ ಕೇಳಿ ನನಗೆ ಬಹಳ ಸಿಟ್ಟು ಬಂದಿತು.
7
ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.
8
“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.
9
ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?
10
ನಾನು, ನನ್ನ ಸಹೋದರರು, ಸೇವಕರು ಸಹ, ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.
11
ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.
12
ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.
13
ಇದಲ್ಲದೆ, ನನ್ನ ನಡುಪಟ್ಟಿ ಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.
14
ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.
15
ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ
16
ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ; ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.
17
ಇದಲ್ಲದೆ, ಯೆಹೂದ್ಯರಲ್ಲಿ ನೂರೈವತ್ತುಮಂದಿ ಅಧಿಕಾರಿಗಳು ಹಾಗು ಸುತ್ತಣ ಜನಾಂಗಗಳ ಮಧ್ಯೆ ಇಂದ ನಮ್ಮ ಬಳಿಗೆ ಬರುತ್ತಿದ್ದವರು ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.
18
ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕರು, ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧ ಆಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆ. ನನಗೆ ಇಷ್ಟೆಲ್ಲಾ ವೆಚ್ಚ ಆಗುತ್ತಿದ್ದರೂ, ಆ ಜನರು ಮಾಡಬೇಕಾಗಿದ್ದ ಕೆಲಸ ಬಹುಕಷ್ಟಕರವಾಗಿದ್ದುದರಿಂದ, ನಾನು ರಾಜಪಾಲನೆಗೆ ಸಲ್ಲತಕ್ಕ ಭತ್ಯವನ್ನು ವಸೂಲಿ ಮಾಡಲಿಲ್ಲ.
19
‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 6 →
All chapters:
1
2
3
4
5
6
7
8
9
10
11
12
13