bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Numbers 1
Numbers 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
1
ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:
2
“ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.
3
ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು.
4
ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;
5
ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.
6
ಸಿಮೆಯೋನ್ ಕುಲದಿಂದ ಚೂರಿಷದ್ದೈಯನ ಮಗ ಶೆಲುಮೀಯೇಲ್
7
ಯೆಹೂದ ಕುಲದಿಂದ ಅಮ್ಮೀನಾದಾಬನ ಮಗ ನಹಶೋನ್
8
ಇಸ್ಸಾಕಾರ್ ಕುಲದಿಂದ ಚೂವಾರನ ಮಗ ನೆತನೇಲ್
9
ಜೆಬುಲೊನ್ ಕುಲದಿಂದ ಹೇಲೋನನ ಮಗ ಎಲೀಯಾಬ್
10
ಜೀಸೆಫನ ವಂಶದವರಲ್ಲಿ - ಎಫ್ರಾಯಿಮ್ ಕುಲದಿಂದ ಅಮ್ಮೀಹೂದನ ಮಗ ಎಲೀಷಾಮಾ ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್
11
ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗ ಅಬೀದಾನ್
12
ದಾನ್ ಕುಲದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್
13
ಆಶೇರ್ ಕುಲದಿಂದ ಒಕ್ರಾನನ ಮಗ ಪಗೀಯೇಲ್
14
ಗಾದ್ ಕುಲದಿಂದ ರೆಗೂವೇಲನ ಮಗ ಎಲ್ಯಾಸಾಫ್
15
ನಫ್ತಾಲಿ ಕುಲದಿಂದ ಏನಾನನ ಮಗ ಅಹೀರ.
16
ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.
17
ಹೀಗೆ ಹೆಸರಿನಿಂದ ಸೂಚಿತರಾದ ವ್ಯಕ್ತಿಗಳನ್ನು ಮೋಶೆ ಮತ್ತು ಆರೋನರು ಕರೆದರು.
18
ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.
19
ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.
20
ಇಸ್ರಯೇಲನ ಚೊಚ್ಚಲ ಮಗ ರೂಬೇನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 46,500:
22
ಸಿಮೆಯೋನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 59,300:
24
ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650:
26
ಯೆಹೂದ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 74,600:
28
ಇಸ್ಸಾಕಾರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 54,400:
30
ಜೆಬುಲೂನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 57,400:
32
ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:
34
ಮನಸ್ಸೆ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 32,200:
36
ಬೆನ್ಯಾಮೀನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 35,400:
38
ದಾನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 62,700:
40
ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500:
42
ನಫ್ತಾಲಿ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 53,400:
44
ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು.
45
ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:
47
ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.
48
ಏಕೆಂದರೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದ್ದರು:
49
“ನೀನು ಇಸ್ರಯೇಲರನ್ನು ಎಣಿಸುವಾಗ ಲೇವಿಯನ್ನು ಎಣಿಸಬಾರದು.
50
ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
51
ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
52
ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.
53
ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
54
ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36