bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Numbers 33
Numbers 33
Kannada Bible (KNCL) BSI 2016
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 34 →
1
ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ:
2
ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು.
3
ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.
4
ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.
5
ಇಸ್ರಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.
6
ಸುಕ್ಕೋತಿನಿಂದ ಹೊರಟು ಮರುಭೂಮಿಯ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.
7
ಏತಾಮಿನಿಂದ ಹೊರಟು ಬಾಳ್ಚೆಪೋನಿಗೆ ಎದುರಿಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು.
8
ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
9
ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.
10
ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.
11
ಅಲ್ಲಿಂದ ಹೊರಟು ಸೀನ್ ಮರುಭೂಮಿಯಲ್ಲೂ,
12
ಅಲ್ಲಿಂದ ದೊಷ್ಕದಲ್ಲೂ,
13
ಅನಂತರ ಅಲೂಷಿನಲ್ಲೂ ಇಳಿದುಕೊಂಡರು.
14
ಅಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಅವರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.
15
ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲೂ
16
ಅಲ್ಲಿಂದ ಹೊರಟು ಕಿಬ್ರೋತ್ ಹತಾವಾದಲ್ಲೂ
17
ಕಿಬ್ರೋತ್ ಹತಾವಾದಿಂದ ಹಚೆರೋತಿನಲ್ಲೂ
18
ಹಚೆರೋತಿನಿಂದ ರಿತ್ಮದಲ್ಲೂ
19
ರಿತ್ಮದಿಂದ ರಿಮ್ಮೋನ್ ಪೆರೆಚಿನಲ್ಲೂ
20
ರಿಮ್ಮೋನ್ ಪೆರೆಚಿನಿಂದ ಲಿಬ್ನದಲ್ಲೂ
21
ಲಿಬ್ನದಿಂದ ರಿಸ್ಸದಲ್ಲೂ
22
ರಿಸ್ಸದಿಂದ ಕೆಹೇಲಾತದಲ್ಲೂ
23
ಕೆಹೇಲಾತದಿಂದ ಶೆಫೆರ್ ಬೆಟ್ಟದಲ್ಲೂ
24
ಅಲ್ಲಿಂದ ಹರಾದದಲ್ಲೂ
25
ಹರಾದದಿಂದ ಹೊರಟು ಮಖೇಲೋತಿನಲ್ಲೂ ಇಳಿದುಕೊಂಡರು.
26
ಮಖೇಲೋತಿನಿಂದ ಹೊರಟು ತಹತಿನಲ್ಲೂ
27
ತಹತಿನಿಂದ ತೆರಹದಲ್ಲೂ
28
ತೆರಹದಿಂದ ಮಿತ್ಕದಲ್ಲೂ
29
ಮಿತ್ಕದಿಂದ ಹಷ್ಮೋನದಲ್ಲೂ
30
ಹಷ್ಮೋನದಿಂದ ಮೋಸೇರೋತಿನಲ್ಲೂ
31
ಮೋಸೇರೋತಿನಿಂದ ಬೆನೇಯಾಕಾನಿನಲ್ಲೂ
32
ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲೂ
33
ಹೋರ್ಹಗಿದ್ಗಾದಿನಿಂದ ಯೋಟ್ಬಾತದಲ್ಲೂ
34
ಯೋಟ್ಬಾತದಿಂದ ಅಬ್ರೋನದಲ್ಲೂ
35
ಅಬ್ರೋನದಿಂದ ಎಚ್ಯೋನ್ ಗೆಬೆರಿನಲ್ಲೂ
36
ಎಚ್ಯೋನ್ ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದೇ ಕಾದೇಶ್.
37
ಕಾದೇಶಿನಿಂದ ಹೊರಟು ಎದೋಮ್ಯರ ನಾಡಿನ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.
38
ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.
39
ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು.
40
ಇಸ್ರಯೇಲರು ಬರುತ್ತಾರೆಂಬ ವಾರ್ತೆ ಕಾನಾನ್ ನಾಡಿನ ದಕ್ಷಿಣಪ್ರಾಂತ್ಯದಲ್ಲಿ ವಾಸ ಆಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನಿಗೆ ಮುಟ್ಟಿತು.
41
ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಚೆಲ್ಮೋನದಲ್ಲಿ ಇಳಿದುಕೊಂಡರು.
42
ಚೆಲ್ಮೋನದಿಂದ ಪೂನೋನಿನಲ್ಲೂ
43
ಪೂನೋನಿನಿಂದ ಓಬೋತಿನಲ್ಲೂ
44
ಓಬೋತಿನಿಂದ ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.
45
ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲೂ
46
ದೀಬೋನ್ ಗಾದಿನಿಂದ ಅಲ್ಮೋನ್ ದಿಬ್ಲಾತಯಿಮಿನಲ್ಲೂ
47
ಅಲ್ಲಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಮೂಡಣದಲ್ಲಿ ಇಳಿದುಕೊಂಡರು.
48
ಅಬಾರೀಮ್ ಬೆಟ್ಟಗಳಿಂದ ಹೊರಟು ಜೆರಿಕೋ ಪಟ್ಟಣದ ಹತ್ತಿರ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.
49
ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.
50
ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:
51
“ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದಾಗ
52
ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.
53
ನಾನು ಆ ನಾಡನ್ನು ನಿಮಗೆ ಸ್ವಂತ ನಾಡಾಗಲೆಂದು ಕೊಟ್ಟಿದ್ದೇನೆ. ಆದ್ದರಿಂದ ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲೇ ವಾಸಮಾಡಿ.
54
ಚೀಟು ಹಾಕಿ ಅದನ್ನು ನಿಮ್ಮ ನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಿ. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಆಸ್ತಿ ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಅಲ್ಲೇ ಆ ಕುಟುಂಬದ ಸೊತ್ತಿರಬೇಕು. ಒಂದೊಂದು ಕುಲಕ್ಕೆ ಸೇರಿದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.
55
ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.
56
ಅಲ್ಲದೆ, ನಾನು ಅವರಿಗೆ ಮಾಡಯೋಚಿಸಿದಂತೆ ನಿಮಗೇ ಮಾಡುವೆನು’.”
← Chapter 32
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 34 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36