bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Revelation 4
Revelation 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 5 →
1
ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.
2
ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.
3
ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.
4
ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.
5
ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.
6
ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.
7
ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು.
8
ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ: “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.
9
ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.
10
ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ:
11
ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22