bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Romans 4
Romans 4
Kannada Bible (KNCL) BSI 2016
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 5 →
1
ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?
2
ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.
3
ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.”
4
ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ; ಅದು ಅವನ ಕಷ್ಟಾರ್ಜಿತ ಸಂಪಾದನೆ.
5
ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.
6
ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ:
7
“ಯಾರ ಅಪರಾಧಗಳು ಪರಿಹರಿಸಲಾಗಿವೆಯೋ ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು!
8
ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!”
9
ಈ ಆಶೀರ್ವಚನವು ಸುನ್ನತಿ ಮಾಡಿಸಿಕೊಂಡವರಿಗೆ ಮಾತ್ರ ಅನ್ವಯಿಸುತ್ತದೆಯೇ? ಇಲ್ಲ, ಸುನ್ನತಿ ಮಾಡಿಸಿಕೊಳ್ಳದವರಿಗೂ ಅನ್ವಯಿಸುತ್ತದೆ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”
10
ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.
11
ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.
12
ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.
13
ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.
14
ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.
15
ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.
16
ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.
17
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.
18
ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.
19
ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.
20
ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.
21
ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.
22
ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.
23
;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ.
24
ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.
25
ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 5 →
All chapters:
1
2
3
4
5
6
7
8
9
10
11
12
13
14
15
16