bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Song of Solomon 1
Song of Solomon 1
Kannada Bible (KNCL) BSI 2016
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 2 →
1
ಸೊಲೊಮೋನನ ಪರಮಗೀತೆ: ನಲ್ಲೆ:
2
ಚುಂಬಿಸೆನ್ನನು ನಿನ್ನ ತುಟಿಗಳಿಂದ ನಿನ್ನ ಪ್ರೀತಿ ಅತಿ ಮಧುರ ಮಧುಪಾನಕ್ಕಿಂತ.
3
ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.
4
ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!
5
ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.
6
ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.
7
ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ:
8
ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.
9
ಫರೋಹನ ರಥವನ್ನೆಳೆವ ಹೆಣ್ಣುಕುದುರೆಗೆ ಹೋಲಿಸಿರುವೆ ನಾ ನಿನ್ನನು ಪ್ರಿಯಳೇ.
10
ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!
11
ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ:
12
ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು.
13
ನನ್ನ ಭಾಗ್ಯಕ್ಕೆ ನನ್ನ ನಲ್ಲ ಸ್ತನಗಳ ಮಧ್ಯೆಯಿರುವ ಪರಿಮಳ ಚೀಲ.
14
ನನ್ನ ಪಾಲಿಗೆ ನನ್ನ ಪ್ರಿಯನು ಏನ್ಗೆದಿಯ ತೋಟದ ಹೂಗೊಂಚಲು. ನಲ್ಲ:
15
ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ:
16
ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!
17
ನಮ್ಮ ಹಾಸಿಗೆ ಪಚ್ಚೆಪಸರೇ, ನಮ್ಮ ಮೇಲ್ಛಾವಣಿ ತುರಾಯಿ ಮರಗಳೇ ಅದರ ತೊಲೆಗಳು ದೇವದಾರು ವೃಕ್ಷಗಳೇ.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 2 →
All chapters:
1
2
3
4
5
6
7
8