bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada Bible (KNCL) BSI 2016
/
Zechariah 10
Zechariah 10
Kannada Bible (KNCL) BSI 2016
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 11 →
1
ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.
2
ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.
3
ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.
4
ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.
5
ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”
6
“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.
7
ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.
8
“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.
9
ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.
10
ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.
11
ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.
12
ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 11 →
All chapters:
1
2
3
4
5
6
7
8
9
10
11
12
13
14