Zechariah 4

Kannada Bible (KNCL) BSI 2016

← Chapter 3 Chapter 5 →
14ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು. ಜೆರುಬ್ಬಾಬೆಲನಿಗೆ ದೇವರಿತ್ತ ವಾಗ್ದಾನ ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.” ಸರ್ವೇಶ್ವರ ನನಗೆ ಇನ್ನೊಂದು ಸಂದೇಶವಿತ್ತರು: “ಜೆರುಬ್ಬಾಬೆಲನು ಮಹಾದೇವಾಲಯದ ಕಟ್ಟಡಕ್ಕೆ ಅಸ್ತಿಭಾರವನ್ನು ಹಾಕಿದ್ದಾನೆ. ಆ ಕಟ್ಟಡವನ್ನು ಅವನೇ ಪೂರೈಸುವನು. ನಿನ್ನನ್ನು ಜನರ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರ ಎಂದು ಆಗ ಸರ್ವರಿಗೆ ಗೊತ್ತಾಗುವುದು. ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”
← Chapter 3 Chapter 5 →