bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
2 Chronicles 28
2 Chronicles 28
Kannada (ERV) 1997 (ಪರಿಶುದ್ದ ಬೈಬಲ್)
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 29 →
1
ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿದ್ದು ಹದಿನಾರು ವರ್ಷ ರಾಜ್ಯಭಾರ ಮಾಡಿದನು. ಆಹಾಜನು ತನ್ನ ಪೂರ್ವಿಕನಾದ ದಾವೀದನಂತೆ ಸರಿಯಾದ ರೀತಿಯಲ್ಲಿ ನಡೆದುಕೊಳ್ಳಲಿಲ್ಲ. ದೇವರ ಚಿತ್ತದ ಪ್ರಕಾರ ಜೀವಿಸಲಿಲ್ಲ.
2
ಅವನು ಇಸ್ರೇಲರ ಅರಸರಂತೆ ಕೆಟ್ಟದಾರಿಯಲ್ಲಿ ನಡೆದನು. ಅವನು ಎರಕದ ಬೊಂಬೆಗಳನ್ನು ಮಾಡಿಸಿ ಬಾಳ್ ದೇವರ ವಿಗ್ರಹಗಳನ್ನು ಪೂಜಿಸಿದನು.
3
ಬೆನ್ಹಿನ್ನೋಮ್ ಕಣಿವೆಯಲ್ಲಿ ಧೂಪಹಾಕಿದನು. ತನ್ನ ಸ್ವಂತ ಮಕ್ಕಳನ್ನು ಬೆಂಕಿಯಲ್ಲಿ ಸುಟ್ಟು ವಿಗ್ರಹಗಳಿಗೆ ಆಹುತಿಕೊಟ್ಟನು. ಆ ದೇಶದ ಜನರು ಮಾಡಿದ ಭಯಂಕರ ಪಾಪಗಳನ್ನು ತಾನೂ ಮಾಡಿದನು. ಇಸ್ರೇಲ್ ಜನರು ಆ ದೇಶವನ್ನು ಪ್ರವೇಶಿಸಿದಾಗ ದೇವರು ಅವರನ್ನು ಹೊರಗೆ ಹೊರಡಿಸಿದ್ದನು.
4
ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತಸ್ಥಳಗಳಲ್ಲಿ ಧೂಪಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.
5
ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು. (Verses 5-6)
6
See verse 5
7
ಎಫ್ರಾಯೀಮಿನ ಜಿಕ್ರಿಯು ಧೈರ್ಯಶಾಲಿಯಾದ ಸಿಪಾಯಿ. ಅವನು ಅರಸನಾದ ಆಹಾಜನ ಮಗನಾದ ಮಾಸೇಯನನ್ನು, ಅರಮನೆಯ ಅಧಿಕಾರಿಯಾದ ಅಜ್ರೀಕಾಮನನ್ನು ಮತ್ತು ಅಧಿಕಾರದಲ್ಲಿ ಅರಸನಿಗೆ ಎರಡನೆಯವನಾಗಿದ್ದ ಎಲ್ಕಾನನನ್ನು ಕೊಂದನು.
8
ಇಸ್ರೇಲರ ಸೈನ್ಯದವರು ಯೆಹೂದದಲ್ಲಿ ವಾಸಿಸುವ ಅವರ ಸ್ವಂತ ಕುಟುಂಬದವರಲ್ಲಿ ಎರಡು ಲಕ್ಷ ಮಂದಿಯನ್ನು ಸೆರೆಹಿಡಿದರು. ಅವರ ಹೆಂಗಸರು, ಮಕ್ಕಳು ಮತ್ತು ಅಧಿಕವಾದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದರು. ಇಸ್ರೇಲರು ಇವರೆಲ್ಲರನ್ನೂ, ಅಮೂಲ್ಯ ವಸ್ತುಗಳನ್ನೂ ಸಮಾರ್ಯಕ್ಕೆ ತಂದರು.
9
ಆಗ ಯೆಹೋವನ ಪ್ರವಾದಿಯವರಲ್ಲೊಬ್ಬನು ಅಲ್ಲಿದ್ದನು. ಅವನ ಹೆಸರು ಓದೇದ್. ಓದೇದನು ಸಮಾರ್ಯಕ್ಕೆ ಬರುತ್ತಿದ್ದ ಇಸ್ರೇಲ್ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದದ ಜನರು ಸೋತುಹೋಗುವಂತೆ ಮಾಡಿದನು. ಯಾಕೆಂದರೆ ಆತನು ಅವರ ಮೇಲೆ ಸಿಟ್ಟಿಗೆದ್ದಿದ್ದನು. ನೀವು ಯೆಹೂದದ ಜನರನ್ನು ನಿಷ್ಕರುಣೆಯಿಂದ ಕೊಂದುಹಾಕಿದಿರಿ. ಈಗ ದೇವರು ನಿಮ್ಮ ಮೇಲೆ ಕೋಪಗೊಂಡಿದ್ದಾನೆ.
10
ನೀವು ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲು ಯೋಚಿಸುತ್ತಿದ್ದೀರಿ. ನೀವು ಕೂಡ ಯೆಹೋವನಿಗೆ ವಿರೋಧವಾಗಿ ಪಾಪಮಾಡಲಿಲ್ಲವೇ? ಹೀಗೆ ಮಾಡುವದರಿಂದ ನೀವು ಸಹ ದೇವರ ದೃಷ್ಟಿಯಲ್ಲಿ ಪಾಪಮಾಡುತ್ತಿದ್ದೀರಿ.
11
ಈಗ ನೀವು ನನ್ನ ಮಾತನ್ನು ಕೇಳಿರಿ, ನೀವು ಸೆರೆಹಿಡಿದ ನಿಮ್ಮ ಸಹೋದರ ಸಹೋದರಿಯರನ್ನು ಹಿಂದಕ್ಕೆ ಕಳುಹಿಸಿರಿ. ಯಾಕೆಂದರೆ ಯೆಹೋವನು ನಿಮ್ಮ ಮೇಲೆ ಬಹಳವಾಗಿ ಕೋಪಗೊಂಡಿದ್ದಾನೆ” ಎಂದು ಹೇಳಿದನು.
12
ಆಗ ಇಸ್ರೇಲರ ಸೈನಿಕರು ತಮ್ಮ ಮನೆಗೆ ಯುದ್ಧದಿಂದ ಹಿಂತಿರುಗುವುದನ್ನು ಎಫ್ರಾಯೀಮಿನ ಕೆಲವು ನಾಯಕರು ನೋಡಿದರು. ಆ ನಾಯಕರು ಅವರನ್ನು ಎಚ್ಚರಿಸಿದರು. ಆ ನಾಯಕರುಗಳು ಯಾರೆಂದರೆ: ಯೆಹೋಹಾನಾನನ ಮಗನಾದ ಅಜರ್ಯ, ಮೆಷಿಲ್ಲೇಮೋತನ ಮಗನಾದ ಬೆರೆಕ್ಯ, ಶಲ್ಲೂಮನ ಮಗನಾದ ಹಿಜ್ಕೀಯ ಮತ್ತು ಹೆದ್ಲ್ಯೆಯನ ಮಗನಾದ ಅಮಾಸ.
13
ಈ ನಾಯಕರುಗಳು ಇಸ್ರೇಲರ ಸೈನಿಕರಿಗೆ “ಯೆಹೂದದೇಶದಿಂದ ಸೆರೆಯವರನ್ನು ಇಲ್ಲಿಗೆ ತರಬೇಡಿ. ನೀವು ಹಾಗೆ ಮಾಡಿದರೆ ಅದು ನಿಮ್ಮ ಪಾಪವನ್ನೂ ದೋಷವನ್ನೂ ಮತ್ತಷ್ಟು ಹೆಚ್ಚಿಸುತ್ತದೆ. ಯೆಹೋವನು ಇಸ್ರೇಲರ ಮೇಲೆ ತುಂಬಾ ಸಿಟ್ಟುಗೊಳ್ಳುವನು” ಎಂದು ಹೇಳಿದರು.
14
ಆಗ ಆ ಸೈನಿಕರು ತಮ್ಮ ಬಳಿಯಲ್ಲಿದ್ದ ಸೆರೆಯವರನ್ನು, ಬೆಲೆಬಾಳುವ ವಸ್ತುಗಳನ್ನು ಆ ನಾಯಕರ ಮತ್ತು ಇಸ್ರೇಲರ ಕೈಯಲ್ಲಿ ಕೊಟ್ಟುಬಿಟ್ಟರು.
15
ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.
16
ಅದೇ ಸಮಯದಲ್ಲಿ ಎದೋಮ್ಯರು ಬಂದು ಯೆಹೂದ ಜನರ ಮೇಲೆ ಧಾಳಿಮಾಡಿ ಅವರನ್ನು ಸೋಲಿಸಿದರು. ಯೆಹೂದ ಜನರನ್ನು ಸೆರೆಹಿಡಿದು ತಮ್ಮ ದೇಶಕ್ಕೊಯ್ದರು. ಆಗ ಅರಸನಾದ ಆಹಾಜನು ಅಶ್ಶೂರದ ಅರಸನ ಸಹಾಯ ಕೇಳಿದನು. (Verses 16-17)
17
See verse 16
18
ಫಿಲಿಷ್ಟಿಯರು ಸಹ ಬೆಟ್ಟಪ್ರದೇಶಗಳ ಪಟ್ಟಣಗಳ ಮೇಲೆಯೂ ಧಾಳಿ ಮಾಡಿದರು. ಬೇತ್ಷಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ, ತಿಮ್ನಾ ಮತ್ತು ಗಿಮ್ಜೋ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಅಲ್ಲದೆ ಆ ಪಟ್ಟಣಗಳ ಸುತ್ತಮುತ್ತಲಿನ ಊರುಗಳನ್ನೂ ವಶಪಡಿಸಿಕೊಂಡರು. ಫಿಲಿಷ್ಟಿಯರು ಆ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.
19
ಅರಸನಾದ ಆಹಾಜನು ತನ್ನ ಜನರನ್ನು ಪಾಪಮಾಡಲು ಪ್ರೋತ್ಸಾಹಿಸಿದ್ದಕ್ಕಾಗಿ ಯೆಹೋವನು ಯೆಹೂದ ದೇಶಕ್ಕೆ ಕಷ್ಟವನ್ನು ಕೊಟ್ಟನು. ಆಹಾಜನು ದೇವರಿಗೆ ದ್ರೋಹಮಾಡಿದನು.
20
ಅಶ್ಶೂರದ ಅರಸನಾದ ತಿಗ್ಲತ್ಪಿಲೆಸರನು ಆಹಾಜನಿಗೆ ಸಹಾಯ ಕೊಡುವ ಬದಲು ಅವನಿಗೇ ಕಷ್ಟಕೊಡಲು ಯೆಹೂದಕ್ಕೆ ಬಂದನು.
21
ಆಹಾಜನು ದೇವರ ಆಲಯದಿಂದಲೂ ರಾಜ ನಿವಾಸದಿಂದಲೂ ಮತ್ತು ರಾಜಕುಮಾರರ ಮನೆಯಿಂದಲೂ ಎಲ್ಲಾ ಬೆಳ್ಳಿಬಂಗಾರಗಳನ್ನು ತೆಗೆದು ಅಶ್ಶೂರದ ಅರಸನಿಗೆ ಕೊಟ್ಟರೂ ಅಶ್ಶೂರದ ಅರಸನು ಆಹಾಜನಿಗೆ ಸಹಾಯ ಮಾಡದೆ ಹೋದನು.
22
ಆಹಾಜನಿಗೆ ಸಂಕಟ ಬಂದಾಗಲೂ ಇನ್ನೂ ಹೆಚ್ಚಾಗಿ ಪಾಪ ಮಾಡುತ್ತಾ ಯೆಹೋವನಿಗೆ ಇನ್ನೂ ಹೆಚ್ಚಾಗಿ ದ್ರೋಹಿಯಾದನು.
23
ದಮಸ್ಕದ ಜನರು ಆರಾಧಿಸುವ ಆ ದೇವರುಗಳಿಗೆ ಆಹಾಜನು ಯಜ್ಞಗಳನ್ನರ್ಪಿಸಿದನು. ದಮಸ್ಕದ ಜನರು ಆಹಾಜನನ್ನು ಸೋಲಿಸಿದ್ದರು. ಆಗ ಆಹಾಜನು, “ಅರಾಮ್ಯರು ಪೂಜಿಸುವ ದೇವರು ಅವರಿಗೆ ಸಹಾಯ ಮಾಡಿದನು. ಆದ್ದರಿಂದ ನಾನು ಆ ದೇವರಿಗೆ ಯಜ್ಞವನ್ನರ್ಪಿಸಿ ಆರಾಧಿಸಿದರೆ ಆ ದೇವರು ನನಗೂ ಸಹಾಯ ಮಾಡುವನು” ಎಂದುಕೊಂಡನು. ಆಹಾಜನು ಆ ದೇವರುಗಳನ್ನು ಪೂಜಿಸುವುದರ ಮೂಲಕ ತಾನೂ ಪಾಪಮಾಡಿ ತನ್ನ ಪ್ರಜೆಗಳನ್ನೂ ಪಾಪಮಾಡುವದಕ್ಕೆ ಪ್ರೋತ್ಸಾಹಿಸಿದನು.
24
ಇದಲ್ಲದೆ ದೇವಾಲಯದಿಂದ ಉಪಕರಣಗಳನ್ನೆಲ್ಲಾ ಆಹಾಜನು ಹೊರತೆಗೆದು ಅವುಗಳನ್ನು ಒಡೆದು ಚೂರುಚೂರು ಮಾಡಿದನು; ದೇವಾಲಯದ ಬಾಗಿಲನ್ನು ಮುಚ್ಚಿಸಿದನು. ಅವನು ವೇದಿಕೆಗಳನ್ನು ಮಾಡಿಸಿ ಜೆರುಸಲೇಮಿನ ರಸ್ತೆಗಳ ಮೂಲೆ ಮೂಲೆಗಳಲ್ಲಿ ಕಟ್ಟಿಸಿದನು.
25
ಯೆಹೂದದ ಪ್ರತಿಯೊಂದು ಪಟ್ಟಣಗಳಲ್ಲಿ ಆಹಾಜನು ಧೂಪಹಾಕಲು ಮತ್ತು ಬೇರೆ ದೇವರುಗಳನ್ನು ಪೂಜಿಸಲು ಉನ್ನತಸ್ಥಳಗಳನ್ನು ಮಾಡಿಸಿದನು; ಅನ್ಯ ದೇವರುಗಳಿಗೆ ಧೂಪಹಾಕಲು ಜನರನ್ನು ಪ್ರೋತ್ಸಾಹಿಸಿದನು. ಈ ರೀತಿಯಾಗಿ ತನ್ನ ಪೂರ್ವಿಕರು ಆರಾಧಿಸಿದ ದೇವರಾದ ಯೆಹೋವನನ್ನು ಆಹಾಜನು ರೇಗಿಸಿದನು.
26
ಆರಂಭದಿಂದ ಕೊನೆಯ ತನಕ ಆಹಾಜನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಯೆಹೂದದ ಮತ್ತು ಇಸ್ರೇಲರ ಅರಸರ ಗ್ರಂಥದಲ್ಲಿ ಬರೆದಿರುತ್ತವೆ.
27
ಆಹಾಜನು ಸತ್ತಾಗ ಅವನನ್ನು ಪೂರ್ವಿಕರೊಂದಿಗೆ ಜೆರುಸಲೇಮಿನಲ್ಲಿ ಸಮಾಧಿಮಾಡಿದರು; ಅವನನ್ನು ಇಸ್ರೇಲ್ ರಾಜರುಗಳ ಸ್ಮಶಾನದಲ್ಲಿ ಸಮಾಧಿಮಾಡಲಿಲ್ಲ. ಆಹಾಜನ ಬದಲಿಗೆ ಅವನ ಮಗನಾದ ಹಿಜ್ಕೀಯನು ಅರಸನಾದನು.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 29 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36