bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
2 Kings 12
2 Kings 12
Kannada (ERV) 1997 (ಪರಿಶುದ್ದ ಬೈಬಲ್)
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 13 →
1
ಯೇಹುವು ಇಸ್ರೇಲಿನ ರಾಜನಾಗಿದ್ದ ಏಳನೆಯ ವರ್ಷದಲ್ಲಿ ಯೆಹೋವಾಷನು ಆಳಲಾರಂಭಿಸಿದನು. ಯೆಹೋವಾಷನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದ ಚಿಬ್ಯಳು ಯೆಹೋವಾಷನ ತಾಯಿ.
2
ಯೆಹೋವಾಷನು ಯೆಹೋವನು ಸರಿಯೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಷನು ತನ್ನ ಜೀವಮಾನವೆಲ್ಲ ಯೆಹೋವನಿಗೆ ವಿಧೇಯನಾಗಿದ್ದನು. ಯಾಜಕನಾದ ಯೆಹೋಯಾದಾವನು ಉಪದೇಶಿಸಿದ್ದ ಕಾರ್ಯಗಳನ್ನೆಲ್ಲ ಯೆಹೋವಾಷನು ಮಾಡಿದನು.
3
ಆದರೆ ಅವನು ಉನ್ನತ ಪೂಜಾಸ್ಥಳಗಳನ್ನು ನಾಶಗೊಳಿಸಲಿಲ್ಲ. ಜನರು ಇನ್ನೂ ಆ ಸ್ಥಳಗಳಲ್ಲಿ ಯಜ್ಞಗಳನ್ನು ಅರ್ಪಿಸುತ್ತಾರೆ ಮತ್ತು ಧೂಪಗಳನ್ನು ಸುಡುತ್ತಾರೆ.
4
ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು. (Verses 4-5)
5
See verse 4
6
ಆದರೆ ಯಾಜಕರು ಸರಿಪಡಿಸಲಿಲ್ಲ. ಯೆಹೋವಾಷನು ರಾಜನಾದ ಇಪ್ಪತ್ತಮೂರನೆಯ ವರ್ಷದಲ್ಲಿ, ಯಾಜಕರಿನ್ನೂ ದೇವಾಲಯವನ್ನು ಸರಿಪಡಿಸಲಿಲ್ಲ.
7
ಆದ್ದರಿಂದ ರಾಜನಾದ ಯೆಹೋವಾಷನು ಯಾಜಕನಾದ ಯೆಹೋಯಾದಾವ ಮತ್ತು ಇತರ ಯಾಜಕರನ್ನು ಕರೆಸಿ, “ನೀವು ಆಲಯವನ್ನು ಸರಿಪಡಿಸಲಿಲ್ಲವೇಕೆ? ನಿಮ್ಮಿಂದ ಸೇವೆ ಹೊಂದುವ ಜನರು ಕೊಡುವ ಹಣವನ್ನು ಉಪಯೋಗಿಸಬೇಡಿ. ಆಲಯವನ್ನು ಸರಿಪಡಿಸುವುದಕ್ಕಾಗಿ ಆ ಹಣವನ್ನು ಉಪಯೋಗಿಸಬೇಕು” ಎಂದು ಹೇಳಿದನು.
8
ಆಗ ಯಾಜಕರು ಅವನಿಗೆ, “ನಾವು ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ ಮತ್ತು ಆಲಯವನ್ನು ಸರಿಪಡಿಸುವುದಕ್ಕೆ ಕೈ ಹಾಕುವುದಿಲ್ಲ” ಎಂದು ಹೇಳಿದರು.
9
ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಅದರ ಮೇಲೆ ಒಂದು ರಂಧ್ರ ಮಾಡಿದನು. ನಂತರ ಯೆಹೋಯಾದಾವನು ಆ ಪೆಟ್ಟಿಗೆಯನ್ನು ಯಜ್ಞವೇದಿಕೆಯ ಬಲಗಡೆಯಲ್ಲಿ ಇಟ್ಟನು. ದೇವಾಲಯಕ್ಕೆ ಜನರು ಬರುವ ಬಾಗಿಲಿನಲ್ಲಿ ಈ ಪೆಟ್ಟಿಗೆಯಿತ್ತು. ಕೆಲವು ಮಂದಿ ಯಾಜಕರು ಆಲಯದ ಬಾಗಿಲಿನಲ್ಲಿ ರಕ್ಷಕರಾಗಿ ನಿಂತರು. ಆ ಯಾಜಕರು ಜನರು ಯೆಹೋವನಿಗೆಂದು ಕೊಡುವ ಆ ಹಣವನ್ನು ಪೆಟ್ಟಿಗೆಯಲ್ಲಿ ಹಾಕಿದರು.
10
ಜನರು ದೇವಾಲಯಕ್ಕೆ ಹೋದಾಗ ಆ ಪೆಟ್ಟಿಗೆಯಲ್ಲಿ ಹಣವನ್ನು ಹಾಕಲಾರಂಭಿಸಿದರು. ರಾಜನ ಕಾರ್ಯದರ್ಶಿಯಾಗಲಿ ಪ್ರಧಾನಯಾಜಕನಾಗಲಿ ನೋಡಿದಾಗ ಸಾಕಷ್ಟು ಹಣವು ತುಂಬಿದ್ದರೆ ಅದನ್ನು ಲೆಕ್ಕಹಾಕಿ ಚೀಲಗಳಲ್ಲಿ ತುಂಬಿಡುತ್ತಿದ್ದರು.
11
ನಂತರ ಅವರು ಆ ಹಣದಿಂದ ದೇವಾಲಯದ ಕೆಲಸಗಾರರಿಗೂ ಬಡಗಿಗಳಿಗೂ ಮತ್ತು ದೇವಾಲಯದ ಇತರ ಕೆಲಸಗಾರರಿಗೂ
12
ಕಲ್ಲುಕುಟಿಕರಿಗೂ ಶಿಲ್ಪಿಗಳಿಗೂ ಸಂಬಳ ಕೊಡುತ್ತಿದ್ದರು. ಅವರು ಆ ಹಣದಿಂದ ಮರವನ್ನೂ ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಂಡರು; ಯೆಹೋವನ ಆಲಯವನ್ನು ಸರಿಪಡಿಸಲು ಇತರ ಕೆಲಸಗಳಿಗೆ ಆ ಹಣವನ್ನು ಬಳಸುತ್ತಿದ್ದರು.
13
ಜನರು ದೇವಾಲಯಕ್ಕೆ ಹಣವನ್ನು ಕೊಟ್ಟರು. ಆದರೆ ಯಾಜಕರು ಆ ಹಣವನ್ನು ಬೆಳ್ಳಿಯ ಬಟ್ಟಲು, ಕತ್ತರಿ, ಬೋಗುಣಿ, ತುತ್ತೂರಿ ಅಥವಾ ಬೆಳ್ಳಿಬಂಗಾರಗಳ ಪಾತ್ರೆಗಳಿಗೆ ಉಪಯೋಗಿಸದೆ ಕೆಲಸಗಾರರ ವೇತನಕ್ಕೆ ಉಪಯೋಗಿಸಿದರು. ಆ ಕೆಲಸಗಾರರು ದೇವಾಲಯವನ್ನು ಸರಿಪಡಿಸಿದರು. (Verses 13-14)
14
See verse 13
15
5ಯಾರೂ ಆ ಹಣವನ್ನು ಲೆಕ್ಕಹಾಕಲಿಲ್ಲ. ಇಲ್ಲವೆ ಆ ಹಣವೇನಾಯಿತೆಂದು ಯಾವ ಕೆಲಸಗಾರನನ್ನೂ ಒತ್ತಾಯಿಸಿ ಕೇಳಲಿಲ್ಲ. ಏಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದರು!
16
ಜನರು ತಮ್ಮ ಅಪರಾಧ ಪ್ರಾಯಶ್ಚಿತ್ತ ಮತ್ತು ದೋಷಪರಿಹಾರದ ಸಮಯದಲ್ಲಿ ಹಣವನ್ನು ಕೊಟ್ಟರು. ಆದರೆ ಅಂತಹ ಹಣವನ್ನು ಕೆಲಸಗಾರರ ವೇತನಕ್ಕೆ ಉಪಯೋಗಿಸಲಿಲ್ಲ. ಆ ಹಣವು ಯಾಜಕರಿಗೆ ಸೇರಿದ್ದು.
17
ಹಜಾಯೇಲನು ಅರಾಮ್ಯರ ರಾಜನಾಗಿದ್ದನು. ಹಜಾಯೇಲನು ಗತ್ ಊರನ್ನೂ ಸೋಲಿಸಿದನು. ಆಗ ಅವನು ಜೆರುಸಲೇಮಿನ ವಿರುದ್ಧ ಯುದ್ಧಕ್ಕೆ ಹೋಗಲು ಯೋಚಿಸಿದನು.
18
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.
19
“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೆಹೋವಾಷನು ಮಾಡಿದ ಇತರ ಮಹಾಕಾರ್ಯಗಳ ಬಗ್ಗೆ ಬರೆಯಲಾಗಿದೆ.
20
ಯೆಹೋವಾಷನ ಅಧಿಕಾರಿಗಳು ಅವನ ವಿರುದ್ಧವಾಗಿ ಸಂಚುಮಾಡಿ ಅವನನ್ನು ಸಿಲ್ಲಾಕ್ಕೆ ಹೋಗುವ ರಸ್ತೆಯಲ್ಲಿದ್ದ ಮಿಲ್ಲೋ ಮನೆಯಲ್ಲಿ ಕೊಂದುಹಾಕಿದರು.
21
ಶಿಮೆಯಾತನ ಮಗನಾದ ಯೋಜಾಕಾರನು ಮತ್ತು ಶೋಮೇರನ ಮಗನಾದ ಯೆಹೋದ್ವಾಾದನು ಯೆಹೋವಾಷನ ಅಧಿಕಾರಿಗಳಾಗಿದ್ದರು. ಅವರು ಯೆಹೋವಾಷನನ್ನು ಕೊಂದರು. ಜನರು ಯೆಹೋವಾಷನನ್ನು ದಾವೀದನಗರದಲ್ಲಿ ಅವನ ಪೂರ್ವಿಕರ ಬಳಿ ಸಮಾಧಿಮಾಡಿದರು. ಯೆಹೋವಾಷನ ನಂತರ ಅವನ ಮಗನಾದ ಅಮಚ್ಯನು ನೂತನ ರಾಜನಾದನು.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
Recommended Reading
Commentary
2 Kings Commentaries
→
Devotional
2 Kings Devotional Guide
→
Get This Bible
ERV Study Bible
→