2 Kings 23

Kannada (ERV) 1997 (ಪರಿಶುದ್ದ ಬೈಬಲ್‌)

← Chapter 22 Chapter 24 →
8ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು. (Verses 8-9)
← Chapter 22 Chapter 24 →

Recommended Reading