bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Amos 6
Amos 6
Kannada (ERV) 1997 (ಪರಿಶುದ್ದ ಬೈಬಲ್)
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 7 →
1
ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.
2
ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.
3
ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.
4
ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.
5
ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.
6
ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.
7
ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.
8
ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”
9
ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು.
10
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.
11
ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.
12
ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.
13
ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.
14
“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.
← Chapter 5
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 7 →
All chapters:
1
2
3
4
5
6
7
8
9