bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada (ERV) 1997 (ಪರಿಶುದ್ದ ಬೈಬಲ್)
/
Deuteronomy 2
Deuteronomy 2
Kannada (ERV) 1997 (ಪರಿಶುದ್ದ ಬೈಬಲ್)
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 3 →
1
“ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಮರುಭೂಮಿಗೆ ತಿರುಗಿಹೋದೆವು. ಆ ಮಾರ್ಗವು ಕೆಂಪುಸಮುದ್ರದ ಕಡೆ ಹೋಗುತ್ತಿತ್ತು. ಸೇಯೀರ್ ಬೆಟ್ಟವನ್ನು ಸುತ್ತಿಕೊಂಡು ಹೋಗುವುದಕ್ಕೆ ನಮಗೆ ತುಂಬಾ ದಿವಸಗಳಾದವು.
2
ಆಗ ಯೆಹೋವನು ನನಗೆ ಹೀಗೆ ಹೇಳಿದನು:
3
‘ನೀವು ಬೆಟ್ಟದ ಸುತ್ತ ಸುತ್ತುತ್ತಾ ಬಹಳ ದಿವಸಗಳನ್ನು ಕಳೆದಿರಿ. ಈಗ ನೀವು ಉತ್ತರದಿಕ್ಕಿಗೆ ತಿರುಗಿರಿ.
4
ಇದನ್ನು ಜನರಿಗೆ ತಿಳಿಸು: ನೀವು ಸೇಯೀರ್ ದೇಶದ ಮೂಲಕ ದಾಟಿಹೋಗುವಿರಿ. ಇದು ನಿಮ್ಮ ಸಂಬಂಧಿಕರ ದೇಶ. ಇವರು ಏಸಾವನ ಸಂತತಿಯವರು. ಅವರು ನಿಮಗೆ ಭಯಪಡುವರು; ಆದರೆ ನೀವು ಅವರ ವಿಷಯದಲ್ಲಿ ಎಚ್ಚರಿಕೆಯಾಗಿರಿ.
5
ಅವರ ವಿರುದ್ಧ ಯುದ್ಧ ಮಾಡಬಾರದು. ನಾನು ನಿಮಗೆ ಅವರ ದೇಶದಲ್ಲಿ ಯಾವ ಪಾಲನ್ನೂ ಕೊಡುವುದಿಲ್ಲ. ಅದರ ಒಂದು ಅಡಿ ಜಾಗವನ್ನೂ ಕೊಡುವುದಿಲ್ಲ. ಯಾಕೆಂದರೆ ಸೇಯೀರ್ ಬೆಟ್ಟಪ್ರದೇಶವನ್ನು ಏಸಾವನ ಸ್ವಂತ ದೇಶವನ್ನಾಗಿ ಕೊಟ್ಟಿರುತ್ತೇನೆ.
6
ನೀವು ಅವರ ದೇಶವನ್ನು ದಾಟುವಾಗ ಅವರ ಆಹಾರಸಾಮಾಗ್ರಿಗಳಿಗೂ ನೀರಿಗೂ ಹಣವನ್ನು ಕೊಡಬೇಕು.
7
ನಿಮ್ಮ ದೇವರಾದ ಯೆಹೋವನು ಪ್ರತಿಯೊಂದು ವಿಷಯದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ. ಈ ಮಹಾ ಮರುಭೂಮಿಯ ಮೂಲಕ ನೀವು ನಡೆದುಹೋದದ್ದರ ಬಗ್ಗೆಯೂ ಆತನಿಗೆ ತಿಳಿದಿದೆ. ಕಳೆದ ನಲವತ್ತು ವರ್ಷಗಳಿಂದ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ನಡಿಸಿದ್ದಾನೆ. ನಿಮಗೆ ಬೇಕಾದವುಗಳನ್ನೆಲ್ಲಾ ಒದಗಿಸಿರುತ್ತಾನೆ.’
8
“ಹಾಗೆ ನಾವು ನಮ್ಮ ಸಂಬಂಧಿಕರಾದ ಏಸಾವನ ಜನರ ದೇಶದ ಮೂಲಕ ಪ್ರಯಾಣ ಬೆಳೆಸಿದೆವು. ಜೋರ್ಡನ್ ಕಣಿವೆಯಿಂದ ಏಲತ್ ಮತ್ತು ಎಚ್ಯೋನ್ಗೆಬೆರ್ ಪಟ್ಟಣಗಳಿಗೆ ಹೋಗುವ ಮಾರ್ಗವನ್ನು ಬಿಟ್ಟು, ನಾವು ಮೋವಾಬ್ ದೇಶದ ಮರುಭೂಮಿಗೆ ಹೋಗುವ ರಸ್ತೆಯಲ್ಲಿ ನಡೆದೆವು.
9
“ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”
10
(ಹಿಂದಿನ ಕಾಲದಲ್ಲಿ, ಏಮಿಯ ಜನರು ಆರ್ನಲ್ಲಿ ವಾಸಮಾಡುತ್ತಿದ್ದರು. ಅವರು ಬಲಾಢ್ಯರೂ ಉನ್ನತ ಪುರುಷರೂ ಆಗಿದ್ದರು ಮತ್ತು ಅವರ ಸಂಖ್ಯೆ ಹೆಚ್ಚಾಗಿತ್ತು.
11
ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳಲಾಗುತ್ತಿತ್ತು. ಆದರೆ ಮೋವಾಬ್ಯರು ಅವರನ್ನು ಏಮಿಯರು ಎಂದೇ ಕರೆಯುತ್ತಿದ್ದರು.
12
ಹೋರಿಯರು ಕೂಡಾ ಸೇಯೀರ್ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರಿಂದ ದೇಶವನ್ನು ವಶಮಾಡಿಕೊಂಡು, ಹೋರಿಯರನ್ನು ಸಂಹರಿಸಿ ಆ ದೇಶದಲ್ಲಿ ನೆಲೆಸಿದರು. ಇಸ್ರೇಲರೂ ಅದೇ ರೀತಿಯಲ್ಲಿ ಯೆಹೋವನು ವಾಗ್ದಾನ ಮಾಡಿದ ದೇಶದಲ್ಲಿದ್ದ ನಿವಾಸಿಗಳನ್ನು ಸೋಲಿಸಿ ಅವರ ದೇಶವನ್ನು ಸ್ವಾಧೀನ ಮಾಡಿಕೊಂಡರು.)
13
“ಯೆಹೋವನು ನನಗೆ, ‘ಜೆರೆದ್ ಕಣಿವೆಯ ಆಚೆಕಡೆಗೆ ಹೋಗು’ ಎಂದು ಹೇಳಿದನು. ಆದ್ದರಿಂದ ನಾವು ಜೆರೆದ್ ಕಣಿವೆಯನ್ನು ದಾಟಿದೆವು.
14
ಕಾದೇಶ್ಬರ್ನೇಯದಿಂದ ಜೆರೆದ್ ಕಣಿವೆಯನ್ನು ದಾಟಿ ಆಗಲೇ ಮೂವತ್ತೆಂಟು ವರ್ಷಗಳು ದಾಟಿದ್ದವು. ನಮ್ಮ ಸಮೂಹದಲ್ಲಿದ್ದ ಯುದ್ಧಭಟರೆಲ್ಲಾ ಸತ್ತುಹೋಗಿದ್ದರು. ಹೀಗೆ ಆಗುವುದೆಂದು ದೇವರು ಪ್ರಮಾಣ ಮಾಡಿದ್ದನು.
15
ಯೆಹೋವನು ಅವರಿಗೆ ವಿರುದ್ಧವಾಗಿ ಇದ್ದುದರಿಂದ ಅವರೆಲ್ಲಾ ಸತ್ತು ಜನಸಮೂಹದಿಂದ ಇಲ್ಲವಾದರು.
16
“ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ
17
ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ:
18
‘ಈ ಹೊತ್ತು ಆರ್ ಎಂಬ ಪಟ್ಟಣದ ಗಡಿಯನ್ನು ದಾಟಿ ಮೋವಾಬ್ ದೇಶವನ್ನು ಪ್ರವೇಶಿಸಬೇಕು.
19
ನೀನು ಅಮ್ಮೋನಿಯರ ಬಳಿಗೆ ಹೋಗಬೇಕು. ಆದರೆ ಅವರಿಗೆ ತೊಂದರೆ ಕೊಡಬೇಡ. ಅವರೊಂದಿಗೆ ಯುದ್ಧಮಾಡಬೇಡ. ಯಾಕೆಂದರೆ ಅವರ ದೇಶದಲ್ಲಿ ನಿನಗೆ ಪಾಲಿಲ್ಲ. ಅವರು ಲೋಟನ ಸಂತತಿಯವರು, ಆ ದೇಶವನ್ನು ನಾನು ಅವರಿಗೆ ಕೊಟ್ಟಿರುತ್ತೇನೆ.”
20
(ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಮ್ಜುಮ್ಯರು ಎಂದು ಕರೆಯುತ್ತಿದ್ದರು.
21
ಜಮ್ಜುಮ್ಯರು ತುಂಬಾ ಬಲಶಾಲಿಗಳಾಗಿದ್ದರು; ಅನಾಕ್ಯರಂತೆ ಉನ್ನತ ಪುರುಷರಾಗಿದ್ದರು. ಆದರೆ ಯೆಹೋವನು ಜಮ್ಜುಮ್ಯರನ್ನು ಸೋಲಿಸಲು ಅಮೋರಿಯರಿಗೆ ಸಹಾಯ ಮಾಡಿದನು. ಅಮೋರಿಯರು ಆ ದೇಶವನ್ನು ತಮ್ಮ ಸ್ವಾಧೀನಕ್ಕೆ ತೆಗೆದುಕೊಂಡು ಈಗ ಅದರಲ್ಲಿ ನೆಲೆಸಿರುತ್ತಾರೆ.
22
ಏಸಾವನ ಜನರಿಗೂ ದೇವರು ಅದೇ ರೀತಿ ಮಾಡಿದನು. ಹಿಂದಿನ ಕಾಲದಲ್ಲಿ ಹೋರಿಯರು ಸೇಯೀರ್ನಲ್ಲಿ ವಾಸಿಸುತ್ತಿದ್ದರು. ಆದರೆ ಏಸಾವನ ಜನರು ಅವರನ್ನು ಸೋಲಿಸಿದರು. ಅವನ ಸಂತತಿಯವರು ಈಗಲೂ ಅಲ್ಲಿ ವಾಸಮಾಡುತ್ತಿದ್ದಾರೆ.
23
ಕಫ್ತೋರ್ಯದವರಿಗೂ ದೇವರು ಅದೇ ರೀತಿ ಮಾಡಿದ್ದನು. ಗಾಜಾದ ಸುತ್ತಲಿನ ಪಟ್ಟಣಗಳಲ್ಲಿ ಅವ್ವಿಯ ಜನರು ವಾಸಿಸುತ್ತಿದ್ದರು. ಆದರೆ ಕಫ್ತೋರ್ಯದಿಂದ ಬಂದ ಜನರು ಅವ್ವಿಯರನ್ನು ನಾಶಮಾಡಿ ಅವರ ದೇಶದಲ್ಲಿ ಈಗಲೂ ಅವರು ವಾಸಿಸಿರುತ್ತಾರೆ.)
24
“ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಅರ್ನೋನ್ ಕಣಿವೆಯನ್ನು ದಾಟಲು ಸಿದ್ಧಪಡಿಸಿಕೊ. ಅಮೋರಿಯನೂ ಹೆಷ್ಬೋನಿನ ರಾಜನೂ ಆಗಿರುವ ಸೀಹೋನನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುವೆನು. ಅವನ ರಾಜ್ಯವನ್ನು ನಾನು ನಿನಗೆ ಕೊಡುವೆನು. ಆದುದರಿಂದ ಅವನಿಗೆ ವಿರುದ್ಧವಾಗಿ ಯುದ್ಧಮಾಡಿ ದೇಶವನ್ನು ಸ್ವಾಧೀನಪಡಿಸಿಕೊ.
25
ಸುತ್ತಲಿರುವ ಜನಾಂಗಗಳು ನಿಮಗೆ ಹೆದರಿ ನಡುಗುವಂತೆ ನಾನು ಮಾಡುತ್ತಿದ್ದೇನೆ. ಅವರು ನಿಮ್ಮ ಬಗ್ಗೆ ಸುದ್ದಿಯನ್ನು ಕೇಳಿ ಹೆದರಿಕೊಳ್ಳುವರು ಮತ್ತು ಭಯದಿಂದ ನಡುಗುವರು.’
26
“ನಾವು ಕೆದೇಮೋತಿನ ಮರುಭೂಮಿಯಲ್ಲಿರುವಾಗ ಹೆಷ್ಬೋನಿನ ಅರಸನಾದ ಸೀಹೋನನ ಬಳಿಗೆ ದೂತರನ್ನು ಸಮಾಧಾನದ ಸಂದೇಶದೊಂದಿಗೆ ಕಳುಹಿಸಿದೆನು. ಆ ದೂತರು ಸೀಹೋನನಿಗೆ ಸಮಾಧಾನವನ್ನು ತಂದಿದ್ದರು.
27
ಅವರು ಸೀಹೋನನಿಗೆ, ‘ನಿನ್ನ ರಾಜ್ಯವನ್ನು ನಾವು ದಾಟುವಂತೆ ನಮಗೆ ಅಪ್ಪಣೆ ಕೊಡು. ನಾವು ಮಾರ್ಗದಲ್ಲಿ ಬಲಕ್ಕಾಗಲಿ ಎಡಕ್ಕಾಗಲಿ ಹೋಗುವುದಿಲ್ಲ.
28
ನಾವೇನಾದರೂ ನಿನ್ನ ದೇಶದ ಆಹಾರಪದಾರ್ಥಗಳನ್ನು ತೆಗೆದುಕೊಂಡರೆ, ನೀರನ್ನು ಉಪಯೋಗಿಸಿದರೆ ಅದಕ್ಕೆ ಪ್ರತಿಯಾಗಿ ಬೆಳ್ಳಿಯನ್ನು ಪಾವತಿ ಮಾಡುವೆವು. ನಿಮ್ಮ ದೇಶದ ಮೂಲಕ ನಾವು ಹಾದುಹೋಗಬೇಕಾಗಿದೆಯಷ್ಟೇ.
29
ನಾವು ಜೋರ್ಡನ್ ನದಿಯನ್ನು ದಾಟುವವರೆಗೆ ನಿಮ್ಮ ದೇಶದ ಮೂಲಕ ಹೋಗಿ, ನಮ್ಮ ದೇವರಾದ ಯೆಹೋವನು ಕೊಡಲಿರುವ ದೇಶವನ್ನು ಪ್ರವೇಶಿಸುತ್ತೇವೆ. ಸೇಯೀರ್ನಲ್ಲಿ ವಾಸಿಸುವ ಏಸಾವನ ಜನರೂ, ಆರ್ನಲ್ಲಿ ವಾಸಿಸುವ ಮೋವಾಬ್ಯರೂ ತಮ್ಮ ದೇಶಗಳ ಮೂಲಕ ಹೋಗಲು ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.
30
“ಆದರೆ ಸೀಹೋನನು ನಮಗೆ ದಾಟಿಹೋಗಲು ಬಿಡಲಿಲ್ಲ. ನಮ್ಮ ದೇವರಾದ ಯೆಹೋವನು ಅವನ ಹೃದಯವನ್ನು ಕಠಿಣಗೊಳಿಸಿದನು. ನಾವು ಅವನನ್ನು ಸೋಲಿಸಿ ಅವನ ರಾಜ್ಯವನ್ನು ವಶಪಡಿಸಿಕೊಳ್ಳಬೇಕೆಂದು ಯೆಹೋವನು ಹಾಗೆ ಮಾಡಿದನು. ಆ ರಾಜ್ಯವು ಇಂದಿಗೂ ನಮ್ಮ ವಶದಲ್ಲಿದೆ.
31
ಯೆಹೋವನು ನನಗೆ, ‘ನಾನು ನಿನಗೆ ಸೀಹೋನನನ್ನೂ ಅವನ ಎಲ್ಲಾ ಜನರನ್ನೂ ಅವನ ದೇಶವನ್ನೂ ನಿನಗೆ ಕೊಡುತ್ತೇನೆ. ಈಗ ಹೋಗಿ ಅವನ ದೇಶವನ್ನು ವಶಪಡಿಸಿಕೊ!’ ಎಂದು ಹೇಳಿದನು.
32
“ಅನಂತರ ಸೀಹೋನ್ ಅರಸನೂ ಅವನ ಜನರೂ ನಮ್ಮೊಂದಿಗೆ ಕಾದಾಡಲು ಯಹಜಿ ಎಂಬ ಸ್ಥಳಕ್ಕೆ ಬಂದರು.
33
ಆದರೆ ನಮ್ಮ ದೇವರಾದ ಯೆಹೋವನು ಅವನನ್ನು ನಮ್ಮ ವಶಕ್ಕೆ ಕೊಟ್ಟನು. ನಾವು ಸೀಹೋನ್ ಅರಸನನ್ನೂ ಅವನ ಮಕ್ಕಳನ್ನೂ ಅವನ ಎಲ್ಲಾ ಜನರನ್ನೂ ಸದೆಬಡೆದು ಸೋಲಿಸಿದೆವು.
34
ಅವನಿಗೆ ಒಳಪಟ್ಟ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡೆವು. ಪ್ರತಿಯೊಂದು ಪಟ್ಟಣದಲ್ಲಿದ್ದ ಗಂಡಸರು, ಹೆಂಗಸರು, ಮಕ್ಕಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ.
35
ಅವರ ದನಕರುಗಳನ್ನು ಮತ್ತು ಅವರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಸೂರೆಮಾಡಿದೆವು.
36
ನಾವು ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಎಂಬ ಊರನ್ನು ಮತ್ತು ಆ ಕಣಿವೆಯ ಮಧ್ಯದಲ್ಲಿದ್ದ ಇನ್ನೊಂದು ಊರನ್ನು ವಶಪಡಿಸಿಕೊಂಡೆವು. ಅರ್ನೋನ್ ಕಣಿವೆ ಮತ್ತು ಗಿಲ್ಯಾದ್ಗಳ ನಡುವೆ ಇರುವ ಎಲ್ಲಾ ಪಟ್ಟಣಗಳನ್ನು ಸೋಲಿಸಲು ಯೆಹೋವನು ಅವಕಾಶ ಮಾಡಿಕೊಟ್ಟನು. ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಿ ಕಂಡುಬರಲಿಲ್ಲ.
37
ಆದರೆ ಅಮ್ಮೋನಿಯರಿಗೆ ಸೇರಿದ ದೇಶದ ಸಮೀಪಕ್ಕೆ ನಾವು ಹೋಗಲಿಲ್ಲ: ಯಬ್ಬೋಕ್ ನದಿಯ ಬದಿಗೂ ನಾವು ಹೋಗಲಿಲ್ಲ: ಬೆಟ್ಟಪ್ರದೇಶಗಳ ಪಟ್ಟಣಗಳಿಗೂ ನಾವು ಹೋಗಲಿಲ್ಲ: ನಮ್ಮ ದೇವರಾದ ಯೆಹೋವನು ನಮಗೆ ಕೊಡದೆ ಇರುವ ದೇಶಗಳ ಬಳಿಗೆ ನಾವು ಹೋಗಲೇ ಇಲ್ಲ.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34